ಗುರುವಾರ , ಅಕ್ಟೋಬರ್ 21, 2021
29 °C

India Covid-19 Update: ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಲ್ಲಿ ಕೋವಿಡ್‌–19 ಸಕ್ರಿಯ ಪ್ರಕರಣಗಳು ನಿರಂತರವಾಗಿ ಇಳಿಮುಖವಾಗುತ್ತಿದ್ದು, ಶುಕ್ರವಾರ ಬೆಳಿಗ್ಗೆ 8 ರವರೆಗಿನ ಮಾಹಿತಿಯಂತೆ ಒಟ್ಟು ಸೋಂಕಿನ ಪ್ರಕರಣಗಳಲ್ಲಿ ಶೇ 0.89ರಷ್ಟು ಸಕ್ರಿಯ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,00,162ಕ್ಕೆ ಇಳಿದಿದೆ. ಇದು 188 ದಿನಗಳಲ್ಲಿ ಅತೀ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಇದು 2020ರ ಮಾರ್ಚ್‌ ತಿಂಗಳಿನಿಂದ ಇಲ್ಲಿವರೆಗೆ ದಾಖಲಾಗಿರುವ ಅತಿ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಗುರುವಾರ ಹೊಸದಾಗಿ 1478 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

ಇಪ್ಪತ್ನಾಲ್ಕು ಗಂಟೆಗಳಲ್ಲಿ 31,382 ಹೊಸ ಕೋವಿಡ್‌ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿನ ಪ್ರಕರಣಗಳ ಸಂಖ್ಯೆ 3,35,94,803ಕ್ಕೆ ಏರಿಕೆಯಾಗಿದೆ. ಹೊಸದಾಗಿ 318 ಸಾವಿನ ಪ್ರಕರಣಗಳು ವರದಿಯಾಗಿವೆ. ಸಾವಿನ ಒಟ್ಟು ಪ್ರಕರಣಗಳ ಸಂಖ್ಯೆ 4,46,368ಕ್ಕೆ ಏರಿದೆ.  ಗುಣಮುಖರಾದವರ ಪ್ರಮಾಣ ಶೇ 97.78ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು