ಸೋಮವಾರ, ಅಕ್ಟೋಬರ್ 18, 2021
23 °C

India Covid-19 Update: 206 ದಿನಗಳಲ್ಲಿಯೇ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಒಂದೇ ದಿನ 19,740 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3,39,35,309ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,36,643ಕ್ಕೆ ಇಳಿದಿದ್ದು, ಇದು ಕಳೆದ 206 ದಿನಗಳಲ್ಲಿಯೇ ಅತ್ಯಂತ ಕಡಿಮೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.

ಶನಿವಾರ ಮುಂಜಾನೆ 8ಗಂಟೆವರೆಗಿನ ಮಾಹಿತಿ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 248 ಜನರು ಸಾವಿಗೀಡಾಗಿದ್ದಾರೆ. ಒಟ್ಟಾರೆ 4,50,375 ಜನರು ಈವರೆಗೆ ಮೃತಪಟ್ಟಿದ್ದಾರೆ.

ಸದ್ಯ ದೇಶದಲ್ಲಿ 2,36,643 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.70ರಷ್ಟಿದೆ. ಕಳೆದ ಮಾರ್ಚ್‌ನಿಂದೀಚೆಗೆ ಇದು ಅತ್ಯಂತ ಕಡಿಮೆ. ರಾಷ್ಟ್ರೀಯ ಕೋವಿಡ್-19 ಚೇತರಿಕೆ ಪ್ರಮಾಣ ಶೇ 97.98ರಷ್ಟಿದ್ದು, ಕಳೆದ ವರ್ಷದ ಮಾರ್ಚ್‌ನಿಂದ ಅತ್ಯಧಿಕವಾಗಿದೆ ಎಂದು ಅದು ಹೇಳಿದೆ.

24 ಗಂಟೆಗಳ ಅವಧಿಯಲ್ಲಿ 3,578 ಸಕ್ರಿಯ ಕೋವಿಡ್-19 ಪ್ರಕರಣಗಳ ಇಳಿಕೆ ಕಂಡುಬಂದಿದೆ ಎಂದು ಸಚಿವಾಲಯದ ಮಾಹಿತಿ ತಿಳಿಸಿದೆ. ದೈನಂದಿನ ಪಾಸಿಟಿವಿಟಿ ದರವು ಶೇಕಡ 1.56ರಷ್ಟಿದೆ. ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 3,32,48,291ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣವು ಶೇ 1.33ರಷ್ಟು ದಾಖಲಾಗಿದೆ ಎಂದು ಅದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು