ಗುರುವಾರ , ಮಾರ್ಚ್ 30, 2023
32 °C

ದೇಶದಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ: 443 ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಒಂದು ದಿನದಲ್ಲಿ ಭಾರತದಲ್ಲಿ 10,423 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಇದು 259 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಂಗಳವಾರದ ನವೀಕರಿಸಿದ ದತ್ತಾಂಶ ತಿಳಿಸಿದೆ.

ಮಂಗಳವಾರ ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ಮಾಹಿತಿಯ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆ 1,53,776 ಕ್ಕೆ ಇಳಿದಿದ್ದು ಇದು 250 ದಿನಗಳಲ್ಲೇ ಅತಿ ಕಡಿಮೆ ಪ್ರಕರಣಗಳಾಗಿವೆ. ಈ ಮೂಲಕ ಕೋವಿಡ್‌ ಪ್ರಕರಣಗಳ ಸಂಖ್ಯೆ 3,42,96,237 ಕ್ಕೆ ತಲುಪಿದೆ.

443 ಸಾವುಗಳೊಂದಿಗೆ ಸಾವಿನ ಸಂಖ್ಯೆ 4,58,880 ಕ್ಕೆ ತಲುಪಿದೆ. 

ಸತತ 128 ದಿನಗಳಿಂದ ದೈನಂದಿನ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ ಕಡಿಮೆ ವರದಿಯಾಗಿದೆ. ಸಕ್ರಿಯ ಪ್ರಕರಣಗಳು ಶೇ 0.45 ರಷ್ಟಿದೆ. ಚೇತರಿಕೆ ಪ್ರಮಾಣವು ಶೇ 98.21 ಇದೆ ಎಂದು ಸಚಿವಾಲಯ ಹೇಳಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು