ಕೋವಿಡ್: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,451 ಹೊಸ ಪ್ರಕರಣ ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ಹೊಸದಾಗಿ 11,451 ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಈ ಮೂಲಕ ಒಟ್ಟು ಸೋಂಕಿನ ಪ್ರಕರಣಗಳ ಸಂಖ್ಯೆ 3,43,66,987ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.
ಇದೇ ಅವಧಿಯಲ್ಲಿ 2,019 ಹೊಸ ಸಕ್ರಿಯ ಪ್ರಕರಣಗಳ ಸಂಖ್ಯೆ ವರದಿಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,42,826ಕ್ಕೆ ಇಳಿಕೆಯಾಗಿದೆ. ಇದು ಕಳೆದ 262 ದಿನಗಳಲ್ಲಿ ವರದಿಯಾಗಿರುವ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ.
ಭಾನುವಾರ ಒಂದು ದಿನದಲ್ಲಿ ಕೋವಿಡ್ ಸೋಂಕಿನಿಂದ 266 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗಿನ ಒಟ್ಟು ಸಾವಿನ ಸಂಖ್ಯೆ 4,61,057ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿನ ಪ್ರಕರಣಗಳ ಸಕ್ರಿಯ ಪ್ರಮಾಣ ಶೇ 0.42ರಷ್ಟಾಗಿದೆ. ಕಳೆದ 31 ದಿನಗಳಿಂದ ದೇಶದಲ್ಲಿ ಹೊಸ ಸೋಂಕಿನ ಪ್ರಕರಣಗಳ ಸಂಖ್ಯೆ 20 ಸಾವಿರದ ಒಳಗೆ ವರದಿಯಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.