ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid-19 Update: ಕೋವಿಡ್‌-19 ಸಕ್ರಿಯ ಪ್ರಕರಣ 203 ದಿನಗಳಲ್ಲೇ ಕನಿಷ್ಠ

Last Updated 6 ಅಕ್ಟೋಬರ್ 2021, 5:40 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,833 ಹೊಸ ಕೋವಿಡ್–19 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,38,71,881ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 203 ದಿನಗಳಲ್ಲೇ ಕನಿಷ್ಠ ಪ್ರಮಾಣವಾದ2,46,687ಕ್ಕೆ ಕುಸಿದಿದೆ.

ಕೋವಿಡ್‌ನಿಂದ 278 ಮಂದಿ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ4,49,538ಕ್ಕೆ ಏರಿದೆ. ಕೇರಳವೊಂದರಲ್ಲೇ ಮೃತರ ಸಂಖ್ಯೆ 151ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಕಳೆದ ಹನ್ನೆರಡು ದಿನಗಳಿಂದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 30 ಸಾವಿರದೊಳಗಿದೆ.ಒಟ್ಟು ಸೋಂಕಿತರಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.73ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ 97.94ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT