ಶನಿವಾರ, ಏಪ್ರಿಲ್ 1, 2023
29 °C

India Covid-19 Update: ಕೋವಿಡ್‌ ಸಕ್ರಿಯ ಪ್ರಕರಣಗಳು ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಒಂದು ದಿನದಲ್ಲಿ 12,514 ಕೋವಿಡ್‌ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಸೋಮವಾರದ ನವೀಕರಿಸಿದ ದತ್ತಾಂಶ ಹೇಳಿದೆ.

ನವೀಕರಿಸಿದ ದತ್ತಾಂಶದ ಪ್ರಕಾರ ಸೋಮವಾರ ಬೆಳಿಗ್ಗೆ 8 ಗಂಟೆಗೆ, 251 ಹೊಸ ಸಾವುಗಳೊಂದಿಗೆ ಸಾವಿನ ಸಂಖ್ಯೆ 4,58,437 ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,42,85,814 ಕ್ಕೆ ಏರಿಕೆಯಾಗಿದೆ. ಇದು ಕಳೆದ 248 ದಿನಗಳಲ್ಲಿ ದಾಖಲಾದ ಅತಿ ಕಡಿಮೆ ಪ್ರಕರಣಗಳು. 

ದೈನಂದಿನ ಹೊಸ ಪ್ರಕರಣಗಳು ಸತತ 127 ದಿನಗಳಿಂದ 50 ಸಾವಿರದೊಳಗೆ ವರದಿಯಾಗಿದೆ. ಸಕ್ರಿಯ ಪ್ರಕರಣಗಳು ಶೇ 0.46 ರಷ್ಟಿದೆ. ಚೇತರಿಕೆಯ ಪ್ರಮಾಣವು ಶೇ 98.20 ರಷ್ಟಿದೆ ಎಂದು ಸಚಿವಾಲಯ ಹೇಳಿದೆ. 

ಲಸಿಕಾ ಅಭಿಯಾನದಡಿ ಇದುವರೆಗೆ 106.31 ಗೂ ಹೆಚ್ಚು ಡೋಸ್‌ಗಳನ್ನು ನೀಡಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು