ಶುಕ್ರವಾರ, ಡಿಸೆಂಬರ್ 9, 2022
21 °C

Covid India Update| ಇಂದು 4,129 ಪ್ರಕರಣಗಳು ಪತ್ತೆ: 20 ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ:  ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,129 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಭಾನುವಾರ 4,777 ಪ್ರಕರಣಗಳು ಪತ್ತೆಯಾಗಿದ್ದವು. 

ಅದೇ ಅವಧಿಯಲ್ಲಿ, ಕೋವಿಡ್ ಸಂಬಂಧಿತ 20 ಸಾವುಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 5,28,530ಕ್ಕೆ ಏರಿಕೆಯಾಗಿದೆ. 

ಕಳೆದ ಒಂದು ದಿನ ಅವಧಿಯಲ್ಲಿ 4,688 ಮಂದಿ ಕೋವಿಡ್‌ನಿಂದ ಗುಣವಾಗಿದ್ದಾರೆ. ಸದ್ಯ ದೇಶದಲ್ಲಿ 43,415 ಸಕ್ರಿಯ ಪ್ರಕರಣಗಳಿವೆ.   

ಭಾರತದ ದೈನಂದಿನ ಪಾಸಿಟಿವಿಟಿ ದರವು ಶೇ 2.51ರಷ್ಟು ಇದೆ ಎಂಬುದು ಆರೋಗ್ಯ ಇಲಾಖೆ ಮಾಹಿತಿಯಿಂದ ಗೊತ್ತಾಗಿದೆ. 

ಸೋಮವಾರ ಬೆಳಗ್ಗೆ ಹೊತ್ತಿಗೆ ಭಾರತದಲ್ಲಿ 217.68 ಕೋಟಿಗೂ ಹೆಚ್ಚು ಕೋವಿಡ್‌ ಲಸಿಕೆಗಳನ್ನು ನೀಡಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು