ನವದೆಹಲಿ: ದೇಶದಲ್ಲಿ 444 ಹೊಸ ಪ್ರಕರಣ ದಾಖಲಾಗಿದ್ದು, ಸಕ್ರಿಯ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 3,809ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಇತ್ತೀಚೆಗೆ ತಮಿಳುನಾಡಿನಲ್ಲಿ ಒಂದು ಸಾವು ಸಂಭವಿಸುವುದರ ಮೂಲಕ ಕೊರೊನಾದಿಂದಾಗಿ ಮೃತರ ಸಂಖ್ಯೆ 5,30,782 ತಲುಪಿದೆ.
ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಶೇ. 0.01 ಆಗಿದ್ದು ಚೇತರಿಕೆಯ ಪ್ರಮಾಣ ಶೇ. 98.80ರಷ್ಟಿದೆ ಎಂದು ಸಚಿವಾಲಯ ಪ್ರಕಟಿಸಿದೆ.
ಈ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 4,41,56,345 ಇದ್ದು, ಮರಣ ಪ್ರಮಾಣ ಶೇ 1.19 ಎಂದಿದೆ.
ಲಸಿಕಾ ಅಭಿಯಾನದ ಮೂಲಕ ಈವರೆಗೆ 220.64 ಕೋಟಿ ಸಂಖ್ಯೆಯಲ್ಲಿ ದೇಶದಾದ್ಯಂತ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.