ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Updates: ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 46,216ಕ್ಕೆ ಇಳಿಕೆ

Last Updated 21 ಸೆಪ್ಟೆಂಬರ್ 2022, 5:42 IST
ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 4,510 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ46,216ಕ್ಕೆಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.

ಇದೇ ಅವಧಿಯಲ್ಲಿ 33 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ಕೋವಿಡ್‌ನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 5,28,403ಏರಿದೆ. ಕೇರಳ ಒಂದರಲ್ಲೇ 19 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಈವರೆಗೆ 4,45,47,599 ಮಂದಿಗೆ ಕೋವಿಡ್ ದೃಢಪಟ್ಟಿದೆ.

ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.10 ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.71 ರಷ್ಟಿದೆ.

ದೈನಂದಿನ ಪಾಸಿಟಿವಿಟಿ ದರ ಶೇಕಡ 1.33 ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 1.80ರಷ್ಟಿದೆ.

ದೇಶದಲ್ಲಿ ಈವರೆಗೆ 216.95 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT