ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Update: ಸಕ್ರಿಯ ಪ್ರಕರಣ 30,362ಕ್ಕೆ ಇಳಿಕೆ

Last Updated 7 ಅಕ್ಟೋಬರ್ 2022, 4:49 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,997 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 30,362ಕ್ಕೆ ಇಳಿಕೆಯಾಗಿದೆ.

ಕಳೆದೊಂದು ದಿನದಲ್ಲಿ 3,908 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,40,47,344 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ 4,46,06,460 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,28,754 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 0.94 ಮತ್ತು ವಾರದ ದೃಢ ಪ್ರಮಾಣ ಶೇ 1.34 ಆಗಿದೆ.

ಒಟ್ಟು ಸೋಂಕಿತರ ಪೈಕಿ ಶೇ 0.07 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.74 ಆಗಿದೆ.

ದೇಶದಲ್ಲಿ ಈವರೆಗೆ 89.64 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 218.88 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT