ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಸಕ್ರಿಯ ಪ್ರಕರಣಗಳ ಸಂಖ್ಯೆ 6,559ಕ್ಕೆ ಏರಿಕೆ

Last Updated 21 ಮಾರ್ಚ್ 2023, 11:37 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಹೊಸದಾಗಿ 699 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 6,559ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕೇರಳ ಹಾಗೂ ಒಡಿಶಾದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,808ಕ್ಕೆ ತಲುಪಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 0.71ಕ್ಕೆ ತಲುಪಿದೆ. ದೇಶದಲ್ಲಿ ಇದುವರೆಗೆ ಒಟ್ಟು 4.46 ಕೋಟಿ (4,46,96,984) ಜನರಿಗೆ ಸೋಂಕು ತಗುಲಿದೆ. ಒಟ್ಟು ಪ್ರಕರಣಗಳಲ್ಲಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿವೆ.

ಒಟ್ಟು ಸೋಂಕಿತರಲ್ಲಿ 4,41,59,617 ಜನರು ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ 98.80ರಷ್ಟಿದೆ. ಸಾವಿನ ಪ್ರಮಾಣ ಶೇ 1.19ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಇದುವರೆಗೆ 92.04 ಕೋಟಿ ಜನರಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಯಲ್ಲಿ 97,866 ಜನರಿಗೆ ಪರೀಕ್ಷೆ ಮಾಡಲಾಗಿದೆ. ಲಸಿಕಾ ಅಭಿಯಾನದ ಮೂಲಕ ದೇಶದಲ್ಲಿ 220.65 ಕೋಟಿ ಡೋಸ್‌ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT