ಗುಜರಾತ್ ಎಟಿಎಸ್ನಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ವಿಚಾರಣೆ

ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳ(ಎಟಿಎಸ್) ತಂಡ ಮುಂಬೈನಲ್ಲಿ ವಿಚಾರಣೆ ಒಳಪಡಿಸಿದೆ ಎಂದು ಎಎನ್ಐ ಟ್ವೀಟ್ ಮಾಡಿದೆ.
ಅವರ ಎನ್ಜಿಒವೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಲಾಗಿದೆ.
Gujarat ATS detained and took activist Teesta Setalvad to Santacruz police station in Mumbai pic.twitter.com/X72wZ1pyee
— ANI (@ANI) June 25, 2022
ಮುಂಬೈನಲ್ಲಿರುವ ತೀಸ್ತಾ ನಿವಾಸಕ್ಕೆ ತೆರಳಿದ್ದ ಎಟಿಎಸ್ ತಂಡ ಅವರನ್ನು ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದೆ.
2002ರ ಗುಜರಾತ್ ಗಲಭೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಒಳಗೊಂಡಂತೆ 64 ಮಂದಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿತ್ತು.
ಗಲಭೆಯಲ್ಲಿ ಹತ್ಯೆಗೀಡಾಗಿದ್ದ ಕಾಂಗ್ರೆಸ್ ಮುಖಂಡ ಎಹಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ತೀಸ್ತಾ ಸೆತಲ್ವಾಡ್ ಸಹ ಈ ಪ್ರಕರಣದಲ್ಲಿ ಸಹ ಅರ್ಜಿದಾರರಾಗಿದ್ದರು. 2002ರ ಗಲಭೆ ಸಂತ್ರಸ್ತರಿಗಾಗಿ ತೀಸ್ತಾ ಅವರ ಎನ್ಜಿಒ ಕೆಲಸ ಮಾಡುತ್ತಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.