ನವದೆಹಲಿ: ಗಣರಾಜ್ಯೋತ್ಸವದಂದು ರೈತರ ಪ್ರತಿಭಟನೆ ವೇಳೆ ದೆಹಲಿಯ ಕೆಂಪುಕೋಟೆ ಬಳಿ ನಡೆದ ಹಿಂಸಾಚಾರದ ಸಂಚಿನ ಆರೋಪದ ಮೇಲೆ ಬಂಧಿತರಾಗಿರುವ ನಟ–ಹೋರಾಟಗಾರ ದೀಪ್ ಸಿಧು, ಸೋಮವಾರ ದೆಹಲಿ ನ್ಯಾಯಾಲಯಕ್ಕೆ ಹಾಜರಾದರು.
ಸಿಧು ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳು ದೆಹಲಿಯ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಗಜೇಂದ್ರ ಸಿಂಗ್ ನಗರ್ ಅವರ ಎದುರು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದರು.
ಆರೋಪಿಗಳಲ್ಲಿ ಒಬ್ಬರಾದ ಮೊಹಿಂದರ್ ಸಿಂಗ್ ಖಾಸ್ಲಾ, ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಮ್ಯಾಜಿಸ್ಟ್ರೇಟ್ ಗಜೇಂದ್ರ ಸಿಂಗ್ ಅವರು, ಎಲ್ಲ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿ, ಪ್ರಕರಣದ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.