ರಾಮಾಯಣ ಧಾರಾವಾಹಿಯ ಶ್ರೀರಾಮನ ಪಾತ್ರಧಾರಿ ಅರುಣ್ ಗೋವಿಲ್ ಬಿಜೆಪಿಗೆ ಸೇರ್ಪಡೆ

ನವದೆಹಲಿ: ರಾಮಾಯಣ ಧಾರಾವಾಹಿಯ ಶ್ರೀರಾಮನ ಪಾತ್ರಧಾರಿ ಅರುಣ್ ಗೋವಿಲ್ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ನಾಲ್ಕು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶವೊಂದರ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಅರುಣ್ ಗೋವಿಲ್ ಅವರು ಬಿಜೆಪಿ ಸೇರ್ಪಡೆಯಾಗಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಅರುಣ್ ಗೋವಿಲ್ ಮೂಲತಃ ಉತ್ತರ ಪ್ರದೇಶದ ಮೀರತ್ ಮೂಲದವರು.
1987 ರಲ್ಲಿ ಪ್ರಸಾರವಾಗುತ್ತಿದ್ದ ರಮಾನಂದ ಸಾಗರ್ ಅವರ ಜನಪ್ರೀಯ ಧಾರಾವಾಹಿ ‘ರಾಮಾಯಣ’ದಲ್ಲಿ ಶ್ರೀರಾಮನ ಪಾತ್ರವನ್ನು ಅರುಣ್ ಗೋವಿಲ್ ನಿರ್ವಹಿಸಿದ್ದರು.
ರಾಮ ಜನ್ಮಭೂಮಿ ವಿಚಾರವಾಗಿ 2019ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಗೋವಿಲ್ ಅವರು ಸ್ವಾಗತಿಸಿದ್ದರು.
ರಾಮಾಯಣ ಧಾರಾವಾಹಿಯನ್ನು ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆಯಲ್ಲಿ, ಪ್ರೇಕ್ಷಕರ ಒತ್ತಾಯದ ಮೇರೆ ದೂರದರ್ಶನದಲ್ಲಿ ಮರು ಪ್ರಸಾರ ಮಾಡಲಾಯಿತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.