ಸೋಮವಾರ, ಜೂನ್ 27, 2022
26 °C

ಗಣರಾಜ್ಯೋತ್ಸವ ದಿನದ ಘರ್ಷಣೆ: ಆರೋಪಿ ದೀಪ್ ಸಿಧುಗೆ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗಣರಾಜ್ಯೋತ್ಸವದ ದಿನ ರೈತರ ಟ್ರಾಕ್ಟರ್ ರ್‍ಯಾಲಿಯ ಸಂದರ್ಭ ದೆಹಲಿಯ ಕೆಂಪು ಕೋಟೆ ಸಂಕೀರ್ಣದಲ್ಲಿ ನಡೆದ ಹಿಂಸಾಚಾರ ಪ್ರಕರಣದ ಆರೋಪಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಅವರಿಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

36ರ ಹರೆಯದ ದೀಪು ಸಿಧು ಅವರನ್ನು ಫೆಬ್ರವರಿ 9 ರಂದು ದೆಹಲಿಯಿಂದ 100 ಕಿ.ಮೀ ದೂರದ ಹರಿಯಾಣದ ಕರ್ನಾಲ್‌ನಲ್ಲಿ ಬಂಧಿಸಲಾಗಿತ್ತು. ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ತಾವು ನಡೆಸುತ್ತಿರುವ ಪ್ರತಿಭಟನೆಯ ದಾರಿ ತಪ್ಪಿಸಲು ದೀಪ್ ಸಿಧು ಯತ್ನಿಸಿದ್ದಾರೆ ಎಂದು ರೈತರು ಆರೋಪಿಸಿದ್ದರು.

ಇಬ್ಬರು ವ್ಯಕ್ತಿಗಳಿಂದ ವೈಯಕ್ತಿಕ ಬಾಂಡ್, ತಲಾ ₹ 30,000 ಶೂರಿಟಿ ಪಡೆದು ದೆಹಲಿ ಕೋರ್ಟ್ ಜಾಮೀನು ನೀಡಿದೆ. ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು ಮತ್ತು ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಲಾಗಿದೆ.

ಜನವರಿ 26 ರಂದು ಪ್ರತಿಭಟನಾಕಾರರು ತಾವು ಒಪ್ಪಿದ ಮಾರ್ಗಗಳನ್ನು ಬಿಟ್ಟು ದೆಹಲಿ ಪ್ರವೇಶಿಸಿದ್ದರು. ಕೆಂಪು ಕೋಟೆಗೆ ನುಗ್ಗಿ ದಾಂಧಲೆ ಮಾಡಿದ್ದರು. ರೈತರನ್ನು ದಾರಿ ತಪ್ಪಿಸಿ ಕೆಂಪುಕೋಟೆ ಕಡೆಗೆ ಕರೆದೊಯ್ದು ಘರ್ಷಣೆಗೆ ಕಾರಣವಾದ ಆರೋಪ ದೀಪ್ ಸಿಧು ಅವರ ಮೇಲಿದೆ. ಪದೇ ಪದೇ ಮನವಿ ಮಾಡಿದರೂ ಬಗ್ಗದ ಪ್ರತಿಭಟನಾಕಾರರು ಘರ್ಷಣೆಗೆ ಇಳಿದಿದ್ದರಿಂದ ಪೊಲೀಸರು ಅಶ್ರುವಾಯು ಪ್ರಯೋಗಿಸಿ, ಲಾಠಿ ಚಾರ್ಜ್ ಮಾಡಿದ್ದರು.

ಜನವರಿ 26 ರಂದು ನಡೆದ ಹಿಂಸಾಚಾರದಲ್ಲಿ ಒಬ್ಬ ರೈತರು ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು