ಶುಕ್ರವಾರ, ಏಪ್ರಿಲ್ 23, 2021
28 °C

ನಟ ಮಿಥುನ್ ಚಕ್ರವರ್ತಿ ಬಿಜೆಪಿ ಸೇರ್ಪಡೆ: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

BJP General Secretary Kailash Vijayvargiya meets actor Mithun Chakraborty in Kolkata, Saturday. Credit: PTI

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಭಾನುವಾರ ಬಿಜೆಪಿ ಸೇರ್ಪಡೆಯಾದರು.

ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರ್‍ಯಾಲಿಯಲ್ಲಿ ಮಿಥುನ್ ಚಕ್ರವರ್ತಿ ಭಾಗವಹಿಸಲಿದ್ದಾರೆ. ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಬಿಜೆಪಿ ಹಮ್ಮಿಕೊಂಡಿರುವ ಬೃಹತ್ ರ್‍ಯಾಲಿ ಇದಾಗಿದೆ.

ಓದಿ: 

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳ ಉಸ್ತುವಾರಿ ಕೈಲಾಸ್ ವಿಜಯವರ್ಗೀಯ ಅವರನ್ನು ಮಿಥುನ್ ಚಕ್ರವರ್ತಿ ಶನಿವಾರ ಸಂಜೆ ಭೇಟಿಯಾಗಿದ್ದರು.

ಕೋಲ್ಕತ್ತದ ಮೈದಾನ್ ಪ್ರದೇಶದ ಬ್ರಿಗೇಡ್ ಪರೇಡ್ ಗ್ರೌಂಡ್ಸ್‌ನಲ್ಲಿ ಮೋದಿ ರ‍್ಯಾಲಿ ನಡೆಯಲಿದ್ದು, 10 ಲಕ್ಷ ಜನ ಸೇರಲಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ತಿಳಿಸಿದ್ದಾರೆ.

ಓದಿ: 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು