ಭಾನುವಾರ, ಜೂನ್ 26, 2022
26 °C

ವೇಷ ತೊಟ್ಟು ಪ್ರಧಾನಿ ಮೋದಿ ಕಾಲೆಳೆದ ನಟ ಪ್ರಕಾಶ್ ರಾಜ್

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಕಟು ವಿರೋಧಿಗಳಾಗಿರುವ ನಟ ಪ್ರಕಾಶ್ ರಾಜ್ ಅವರು ತಮಗೆ ಅನಿಸಿದ್ದನ್ನು ಮುಕ್ತವಾಗಿ ಹೇಳುತ್ತಾರೆ.

ಅದರಲ್ಲೂ ಮೋದಿ ಅವರ ಬಗ್ಗೆ ಸದಾ ಒಂದು ಕಣ್ಣಿಟ್ಟಿರುವ ಪ್ರಕಾಶ್ ರಾಜ್ ಸಮಯ ಸಿಕ್ಕಾಗಲೆಲ್ಲಾ ಅವರನ್ನು ವಿರೋಧಿಸಿ ಕಾಲೆಳೆಯುವ ಟ್ವೀಟ್‌ಗಳನ್ನು ಮಾಡುತ್ತಾ ಇರುತ್ತಾರೆ.

ಇತ್ತೀಚೆಗೆ ಗಿರಿಧಾಮವೊಂದಕ್ಕೆ ಭೇಟಿ ನೀಡಿದ್ದ ಪ್ರಕಾಶ್ ರಾಜ್ ಅಲ್ಲಿಯ ಆಕರ್ಷಕ ವೇಷ ತೊಟ್ಟು ಮೋದಿ ಅವರನ್ನು ಉದ್ದೇಶಿಸಿ ಪರೋಕ್ಷವಾಗಿ ಕಿಚಾಯಿಸಿದ್ದಾರೆ.

‘ನೋಡಿ, ಇದು ನಾನು ನಮ್ಮ ಸರ್ವೋಚ್ಚ ನಾಯಕನಿಂದ ಪ್ರಭಾವಿತನಾಗಿ ಈ ವೇಷ ಹಾಕಿಕೊಂಡಿದ್ದೇನೆ. ಸ್ನೇಹಿತರೇ ನೀವು ಏಕೆ ಇದನ್ನು ಪ್ರಯತ್ನಿಸಬಾರದು?‘ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ಕಾಲೆಳದಿದ್ದಾರೆ. ಇದಕ್ಕೆ ಪರ ವಿರೋಧ ವ್ಯಕ್ತವಾಗಿದೆ.

ಪ್ರಧಾನಿ ಮೋದಿ ಅವರು ದೇಶ–ವಿದೇಶಗಳಿಗೆ ಭೇಟಿ ನೀಡಿದಾಗ ಅಲ್ಲಿನ ವಿಶೇಷ ಉಡುಗೆ ತೊಡುಗೆಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ. ಇದು ಕೂಡ ಮೋದಿ ವಿರೋದಿಗಳಿಗೆ ಆಗಾಗ ಆಹಾರವಾಗುವುದನ್ನು ನಾವು ನೋಡುತ್ತಿರುತ್ತೇವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು