ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಭೇಟಿಯಾದ ಸೂಪರ್ ಸ್ಟಾರ್ ರಜನಿಕಾಂತ್

ಮುಂಬೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ.
ಠಾಕ್ರೆ ಅವರ ಪತ್ನಿ ರಶ್ಮಿ ಮತ್ತು ಪುತ್ರರಾದ ಆದಿತ್ಯ ಮತ್ತು ತೇಜಸ್ ಅವರು ಉಪನಗರ ಬಾಂದ್ರಾದಲ್ಲಿರುವ ‘ಮಾತೋಶ್ರೀ’ ನಿವಾಸದಲ್ಲಿ ರಜನಿಕಾಂತ್ ಅವರನ್ನು ಸ್ವಾಗತಿಸಿದ್ದಾರೆ.
ಮಾಜಿ ಸಚಿವ ಆದಿತ್ಯ ಠಾಕ್ರೆ ಅವರು ರಜನಿಕಾಂತ್ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸುತ್ತಿರುವ ಫೋಟೊಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
An absolute delight to have Shri Rajnikant ji at Matoshri once again. pic.twitter.com/94MV7m0Rb9
— Aaditya Thackeray (@AUThackeray) March 18, 2023
ರಜನಿಕಾಂತ್ ಅವರು ಶಿವಸೇನಾ ಸಂಸ್ಥಾಪಕ ಬಾಳಾ ಠಾಕ್ರೆ ಅವರ ಕಟ್ಟಾ ಬೆಂಬಲಿಗರಾಗಿರುವ ಕಾರಣಕ್ಕೆ ಉದ್ಧವ್ ಠಾಕ್ರೆ ನಿವಾಸಕ್ಕೆ ಭೇಟಿ ನೀಡಿದ್ದು, ರಾಜಕೀಯೇತರ ಸಭೆ ನಡೆಸಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.
2010ರ ಅಕ್ಟೋಬರ್‌ನಲ್ಲಿ ರಜನಿಕಾಂತ್, ಬಾಳಾ ಠಾಕ್ರೆ ಅವರನ್ನು ಮಾತೋಶ್ರೀಯಲ್ಲಿ ಭೇಟಿಯಾಗಿದ್ದರು.
ಠಾಕ್ರೆ ನೇತೃತ್ವದ ಶಿವಸೇನಾ ಬಣವು ಮಹಾ ವಿಕಾಸ್ ಅಘಾಡಿಯ (ಎಂವಿಎ) ಒಂದು ಘಟಕವಾಗಿದ್ದು, ಎನ್‌ಸಿಪಿ ಮತ್ತು ಕಾಂಗ್ರೆಸ್ ಕೂಡ ಇದರ ಭಾಗವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.