ಹಿಂಸಾಚಾರ: ಭದ್ರತೆ ಕೋರಿ ಅದಾನಿಯಿಂದ ಕೇರಳ ಹೈಕೋರ್ಟ್‌ಗೆ ಅರ್ಜಿ

ಕೊಚ್ಚಿ: ಇತ್ತೀಚೆಗೆ ಹಿಂಸಾತ್ಮಕ ಪ್ರತಿಭಟನೆಗಳಿಂದಾಗಿ ಕಾಮಗಾರಿ ಸ್ಥಗಿತಗೊಂಡಿರುವ ತಿರುವನಂತಪುರದ ವಿಝಿಂಜಂ ಬಂದರಿನಲ್ಲಿ ನಿರ್ಮಾಣ ಕಾರ್ಯವನ್ನು ಮುಂದುವರಿಸುವ ಸಲುವಾಗಿ ಕೇಂದ್ರೀಯ ಭದ್ರತಾ ಪಡೆಗಳ ನೆರವು ಕೋರಿ ಅದಾನಿ ಸಮೂಹವು ಶುಕ್ರವಾರ ಕೇರಳ ಹೈಕೋರ್ಟ್‌ಗೆ ಮನವಿ ಸಲ್ಲಿಸಿದೆ.
ಪ್ರತಿಭಟನೆಯ ಕಾರಣದಿಂದ ಕಾಮಗಾರಿಗೆ ತಡೆಯೊಡ್ಡುವಿಕೆ ಮತ್ತು ದಿಗ್ಬಂಧನದ ವಿರುದ್ಧ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಅನು ಶಿವರಾಮನ್ ಅವರು, ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯೋಜಿಸುವ ಸಾಧ್ಯತೆಯ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಮತ್ತು ಕೇರಳ ಸರ್ಕಾರಗಳಿಗೆ ಸೂಚನೆ ನೀಡಿದ್ದಾರೆ.
ಅದಾನಿ ಸಮೂಹವು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಉತ್ತರವನ್ನು ಸಲ್ಲಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನ್ಯಾಯಾಲಯವು ಸೂಚಿಸಿದ್ದು, ಡಿಸೆಂಬರ್ 7ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.