ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅದಾನಿ ಸಮೂಹದ ಅಕ್ರಮ: ದೇಶದಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

Last Updated 7 ಫೆಬ್ರುವರಿ 2023, 2:38 IST
ಅಕ್ಷರ ಗಾತ್ರ

ನವದೆಹಲಿ : ಅದಾನಿ ಸಮೂಹದ ಷೇರುಗಳ ಮೌಲ್ಯ ಏರಿಳಿತದ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ದೇಶದ ವಿವಿಧ ನಗರಗಳಲ್ಲಿ ಎಸ್‌ಬಿಐ ಮತ್ತು ಎಲ್‌ಐಸಿ ಕಚೇರಿಗಳ ಮುಂಬಾಗ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.

ಮಹಾರಾಷ್ಟ್ರ, ಮಧ್ಯ ಪ್ರದೇಶ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಈ ವೇಳೆ ಅವರು ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದಾನಿ ಸಮೂಹಗಳ ಉದ್ಯಮಿ ಗೌತಮ್‌ ಅದಾನಿ ದೇಶದಿಂದ ಪರಾರಿಯಾಗುವುದನ್ನು ತಡೆಯಲು ಕೇಂದ್ರ ಸರ್ಕಾರ ತುರ್ತಾಗಿ ಅವರ ಪಾಸ್‌ಪೋರ್ಟ್‌ ಅನ್ನು ವಶಪಡಿಸಿಕೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.

ಈ ಹಿಂದೆ ಉದ್ಯಮಿಗಳಾದ ವಿಜಯ್‌ ಮಲ್ಯ ಮತ್ತು ನೀರವ್‌ ಮೋದಿ ಅವರ ಪಾಸ್‌ಪೋರ್ಟ್‌ ಅನ್ನು ಕೇಂದ್ರದ ಬಿಜೆಪಿ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳದ ಕಾರಣ, ಅವರು ದೇಶದಿಂದ ಪರಾರಿಯಾದರು ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT