ಬುಧವಾರ, ಆಗಸ್ಟ್ 10, 2022
21 °C

ಪಶ್ಚಿಮ ಬಂಗಾಳ ಕಾಂಗ್ರೆಸ್‌ನ ನೂತನ‌ ಅಧ್ಯಕ್ಷರಾಗಿ ಅಧೀರ್‌ ರಂಜನ್‌ ಚೌಧರಿ ನೇಮಕ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪಶ್ಚಿಮ ಬಂಗಾಳ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಅಧೀರ್ ರಂಜನ್ ಚೌಧರಿ ನೇಮಕವಾಗಿದ್ದಾರೆ. 

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಬುಧವಾರ ಈ ನಿರ್ಧಾರ ಕೈಗೊಂಡಿದ್ದಾರೆಂದು ಪಕ್ಷ ತಿಳಿಸಿದೆ. 

ಅಧಿರ್‌ ರಂಜನ್‌ ಚೌಧರಿ ಅವರು ಗಾಂಧಿ ಪರಿವಾರಕ್ಕೆ ಆಪ್ತರಾಗಿದ್ದು, 2019ರಲ್ಲಿ ಸಾರ್ವಜನಿಕ ಖಾತೆಗಳ ಹದಿನೇಳನೇ ಲೋಕಸಭಾ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆಯಾಗಿದ್ದರು. 

ಪಶ್ಚಿಮ ಬಂಗಾಳದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ತಾ ಅವರು ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಆ ಹಿನ್ನೆಲೆಯಲ್ಲಿ ಅಧೀರ್‌ ರಂಜನ್‌ ಚೌಧರಿಯವರ ನೇಮಕ ಅನಿವಾರ್ಯವಾಗಿತ್ತು ಎಂದು ಪಕ್ಷದ ಮೂಲಗಳು ತಿಳಿಸಿವೆ. 

ಮುಂದಿನ ವರ್ಷ ಪಶ್ಚಿಮ ಬಂಗಾಳ ವಿಧಾನ ಸಭೆಗೆ ಚುನಾವಣೆಗಳು ನಡೆಯಲಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು