ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕಾಪಡೆ ಮುಖ್ಯಸ್ಥರಾಗಿ ಹರಿ ಕುಮಾರ್ ಅಧಿಕಾರ ಸ್ವೀಕಾರ

Last Updated 30 ನವೆಂಬರ್ 2021, 15:44 IST
ಅಕ್ಷರ ಗಾತ್ರ

ನವದೆಹಲಿ: ಅಡ್ಮಿರಲ್ ಆರ್.ಹರಿ ಕುಮಾರ್‌ ಅವರು ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡರು.

ಇದಕ್ಕೆ ಮೊದಲು ಅವರು ಪಶ್ಚಿಮ ನೌಕಾ ಕಮಾಂಡ್‌ನ ಫ್ಲಾಗ್ ಆಫೀಸರ್ ಕಮಾಂಡಿಂಗ್–ಇನ್–ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಸೇವೆಯಿಂದ ನಿವೃತ್ತರಾಗಿರುವಅಡ್ಮಿರಲ್ ಕರಮ್‌ಬೀರ್ ಸಿಂಗ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಹರಿಕುಮಾರ್‌ ಅವರು ನೌಕಾಪಡೆಯಲ್ಲಿ 39 ವರ್ಷಗಳ ಸೇವೆ ಸಲ್ಲಿಸಿದ್ದು, ವಿವಿಧ ಕಮಾಂಡ್‌ಗಳಲ್ಲಿ ಕೆಲಸ ಮಾಡಿದ್ದಾರೆ. ವಿಮಾನವಾಹಕ ಯುದ್ಧನೌಕೆ ಐಎನ್‌ಎಸ್‌ ವಿರಾಟ್ ಅನ್ನೂ ಮುನ್ನಡೆಸಿದ್ದ ಅವರು, ಪಶ್ಚಿಮನೌಕಾಸೇನೆಯ ಫ್ಲೀಟ್ ಆಫೀಸರ್ ಆಗಿಯೂ ಕಾರ್ಯನಿರ್ವಹಿಸಿದ್ದರು.ಅವರು ಅಮೆರಿಕದ ನೇವಲ್ ವಾರ್ ಕಾಲೇಜು,ಇಂಗ್ಲೆಂಡ್‌ನ ರಾಯಲ್ ಕಾಲೇಜ್ ಆಫ್ ಡಿಫೆನ್ಸ್ ಸ್ಟಡೀಸ್ ಮತ್ತು ಅಂಬೇಡ್ಕರ್‌ ನಗರದ(ಮಹೂ) ಆರ್ಮಿ ವಾರ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT