ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ಲಾಮಾಬಾದ್: ನಕಲಿ ದಾಖಲೆ ಬಳಸಿ ಜೀವ ವಿಮೆ ಮಾಡಿಸಿದ್ದ ಮನ್ಸೂರ್‌

Last Updated 13 ಡಿಸೆಂಬರ್ 2020, 13:38 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಅಮೆರಿಕದ ಡ್ರೋನ್‌ ದಾಳಿಯಿಂದ ಹತ್ಯೆಗೀಡಾದ ಅಫ್ಗಾನ್‌ ತಾಲಿಬಾನ್‌ ಮುಖ್ಯಸ್ಥ ಮುಲ್ಲಾ ಅಖ್ತರ್‌ ಮನ್ಸೂರ್‌ ನಕಲಿ ದಾಖಲೆಗಳನ್ನು ಬಳಸಿಕೊಂಡು ಪಾಕಿಸ್ತಾನದಲ್ಲಿ ಜೀವ ವಿಮೆ ಮಾಡಿಸಿಕೊಂಡಿದ್ದ, ಸಾವಿಗೂ ಮುನ್ನ ₹ 3ಲಕ್ಷ ಪ್ರೀಮಿಯಂ ಪಾವತಿಸಿದ್ದ ಎಂದು ಭಾನುವಾರ ಡಾನ್‌ ನ್ಯೂಸ್‌ ವರದಿ ಮಾಡಿದೆ.

ಮೇ 21, 2016 ರಂದು ಪಾಕಿಸ್ತಾನ-ಇರಾನ್ ಗಡಿಯಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಮನ್ಸೂರ್ ಸಾವನ್ನಪ್ಪಿದ್ದ. ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಆರೋಪದಲ್ಲಿ ಮನ್ಸೂರ್‌ ಮತ್ತು ಸಹಚರರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆ ವಿಚಾರಣೆ ಸಂದರ್ಭದಲ್ಲಿ ವಿಮಾ ಪಾಲಿಸಿಯ ಮಾಹಿತಿ ಬಹಿರಂಗವಾಗಿದೆ. ವಿಮಾ ಕಂಪನಿ ಕರಾಚಿಯ ಭಯೋತ್ಪಾದನಾ ನಿಗ್ರಹ ನ್ಯಾಯಾಲಯಕ್ಕೆ (ಎಟಿಸಿ) ಈ ಮಾಹಿತಿ ನೀಡಿದೆ.

ಮನ್ಸೂರ್ ಮತ್ತು ಆತನ ಸಹಚರರು ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ಹೊಂದಿಸಲು ನಕಲಿ ದಾಖಲೆಗಳನ್ನು ಬಳಸಿ, ಆಸ್ತಿಗಳನ್ನು ಖರೀದಿಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಕರಾಚಿಯಲ್ಲಿ ಮನ್ಸೂರ್‌ ಹಲವು ಆಸ್ತಿಗಳನ್ನು ಹೊಂದಿದ್ದು, ಅವುಗಳ ಬೆಲೆ ₹ 3.20 ಕೋಟಿ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT