ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ಅಪರಾಧಿ ಖುಲಾಸೆ

ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ನ್ಯಾಯಪೀಠದ ತೀರ್ಪು
Last Updated 28 ಮಾರ್ಚ್ 2023, 6:25 IST
ಅಕ್ಷರ ಗಾತ್ರ

ನವದೆಹಲಿ: ಕೊಲೆ ಪ್ರಕರಣದಡಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ಖುಲಾಸೆಗೊಳಿಸಿದೆ.

ಅಪರಾಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್‌, ಅನಿರುದ್ಧ ಬೋಸ್‌ ಮತ್ತು ಹೃಷಿಕೇಶ್‌ ರಾಯ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ, ‘ಕೊಲೆ ಸಂದರ್ಭದಲ್ಲಿ ಆತನಿಗೆ 12 ವರ್ಷ 6 ತಿಂಗಳು ವಯಸ್ಸಾಗಿತ್ತು ಎಂಬುದು ಶಾಲಾ ದಾಖಲಾತಿ ಪುಸ್ತಕದಿಂದ ದೃಢಪಟ್ಟಿದೆ. ಜೊತೆಗೆ ಆತ ಈಗಾಗಲೇ 28 ವರ್ಷಗಳ ಜೈಲು ಶಿಕ್ಷೆಯನ್ನು ಪೂರೈಸಿದ್ದಾನೆ. ಇದರ ಆಧಾರದಲ್ಲಿ ಆತನನ್ನು ಖುಲಾಸೆಗೊಳಿಸಲಾಗುತ್ತಿದೆ’ ಎಂದು ಹೇಳಿದೆ.

‘1994ರಲ್ಲಿ ಪುಣೆಯಲ್ಲಿ ನಡೆದಿದ್ದ ಘಟನೆಯಲ್ಲಿ ಗರ್ಭಿಣಿ ಸೇರಿದಂತೆ ಐವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಲಾಗಿತ್ತು. ವಿಚಾರಣಾಧೀನ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿತ್ತು. ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ ಈ ತೀರ್ಪನ್ನು ಎತ್ತಿಹಿಡಿದಿದ್ದವು. ಇದನ್ನು ನಾವು ರದ್ದುಪಡಿಸುತ್ತಿದ್ದೇವೆ’ ಎಂದು ನ್ಯಾಯಪೀಠ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT