ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ ಬಳಿಕ ಇ.ಡಿಯಿಂದಲೂ ಮನೀಶ್ ಸಿಸೋಡಿಯಾ ಬಂಧನ

Last Updated 9 ಮಾರ್ಚ್ 2023, 15:55 IST
ಅಕ್ಷರ ಗಾತ್ರ

ನವದೆಹಲಿ: ಅಬಕಾರಿ ನೀತಿಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯವು(ಇ.ಡಿ) ಬಂಧನಕ್ಕೆ ಒಳಪಡಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಿಹಾರ್‌ ಜೈಲಿನಲ್ಲಿ ಎರಡನೇ ಹಂತದ ವಿಚಾರಣೆ ಬಳಿಕ ಸಿಸೋಡಿಯಾ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್‌ಎ) ಬಂಧನಕ್ಕೆ ಒಳಪಡಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ನೀಡುವುದರಿಂದ ಸಿಸೋಡಿಯಾ ನುಣುಚಿಕೊಳ್ಳುತ್ತಿದ್ದಾರೆ ಮತ್ತು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಟಾನದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 26ರಂದು ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು. ಬಳಿಕ, ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಮಾರ್ಚ್ 7ರಂದು ಇ.ಡಿ ಸಿಸೋಡಿಯಾ ಅವರನ್ನು ಮೊದಲ ಬಾರಿಗೆ ವಿಚಾರಣೆ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT