ಶನಿವಾರ, ಅಕ್ಟೋಬರ್ 1, 2022
23 °C

ಸಿಬಿಐ ದಾಳಿ ನಡೆದ ಬೆನ್ನಲ್ಲೇ ದೆಹಲಿ ಸರ್ಕಾರದಿಂದ 12 ಐಎಎಸ್ ಅಧಿಕಾರಿಗಳ ವರ್ಗಾವಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ ನಡೆದ ಕೆಲವೇ ಗಂಟೆಗಳಲ್ಲಿ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರ ಮನೆಯಲ್ಲಿ ಸಿಬಿಐ ಅಧಿಕಾರಿಗಳು ಶುಕ್ರವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: 

ಇದಾದ ಕೆಲವೇ ಗಂಟೆಗಳಲ್ಲಿ ಆಡಳಿತಾತ್ಮಕ ಪುನರ್ ರಚನೆಗೆ ಕೈ ಹಾಕಲಾಗಿದ್ದು, ಐಎಎಸ್ ಅಧಿಕಾರಿಗಳನ್ನು ಹಲವು ಇಲಾಖೆಗಳಿಗೆ ವರ್ಗಾವಣೆ ಮಾಡಲಾಗಿದೆ.

ದೆಹಲಿ ಸರ್ಕಾರದ ಸರ್ವಿಸ್ ಇಲಾಖೆ ಹೊರಡಿಸಿದ ಆದೇಶದ ಪ್ರಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ಕಾರ್ಯದರ್ಶಿ ಉದಿತ್ ಪ್ರಕಾಶ್ ರೈ (2007ರ ಬ್ಯಾಚ್) ಅವರ ಹೆಸರು ಕೂಡ ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳ ಪಟ್ಟಿಯಲ್ಲಿದೆ.

ಇತ್ತೀಚೆಗಷ್ಟೇ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ಉದಿತ್ ಪ್ರಕಾಶ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಶಿಫಾರಸು ಮಾಡಿದ್ದರು. ಎಕ್ಸಿಕ್ಯೂಟಿವ್ ಎಂಜಿನಿಯರ್‌ಗೆ ಅನುಕೂಲ ಮಾಡಿದ್ದ ಪ್ರಕರಣದಲ್ಲಿ ₹50 ಲಕ್ಷ ಲಂಚ ಸ್ವೀಕರಿಸಿದ್ದರು ಎಂಬ ಆರೋಪ ರೈ ಮೇಲೆ ಹೊರಿಸಲಾಗಿದೆ. 

ಉದಿತ್ ಪ್ರಕಾಶ್ ರೈ ಅವರನ್ನು ಆಡಳಿತ ಸುಧಾರಣಾ ಇಲಾಖೆಯ ವಿಶೇಷ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

2007ರ ಬ್ಯಾಚ್‌ನ ಐಎಎಸ್ ಅಧಿಕಾರಿ ವಿಜೇಂದ್ರ ಸಿಂಗ್ ರಾವತ್ ಅವರು ರೈ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಅವರು ಯೋಜನಾ ವಿಭಾಗದ ನಿರ್ದೇಶಕ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿರುತ್ತಾರೆ.

ಇವನ್ನೂ ಓದಿ:
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು