ಗುರುವಾರ , ಅಕ್ಟೋಬರ್ 29, 2020
20 °C

ಕಾಶ್ಮೀರ: ಸಾರಿಗೆ, ಮಾರುಕಟ್ಟೆಗಳು ಪುನರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಕೋವಿಡ್‌ನಿಂದ ತತ್ತರಿಸಿದ್ದ ಕಾಶ್ಮೀರದಲ್ಲಿ ಧಾರ್ಮಿಕ ಕೇಂದ್ರಗಳು ಪುನರಾರಂಭವಾದ ಬೆನ್ನಲ್ಲೇ ಮಾರುಕಟ್ಟೆಗಳು ಸಹ ಶುರುವಾಗಿವೆ. ಅಲ್ಲದೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯೂ ಸೋಮವಾರದಿಂದ ಸಹಜ ಸ್ಥಿತಿಗೆ ಮರಳಿದೆ.

ಈ ತಿಂಗಳ 4ರಂದು ರಾಜ್ಯಮಟ್ಟದ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಪ್ರಕಾರ ಮಾರುಕಟ್ಟೆ ಪ್ರದೇಶದಲ್ಲಿ ಶೇ 50ರಷ್ಟು ಮಳಿಗೆಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಶೇ 50ರಷ್ಟು ಪ್ರಯಾಣಿಕರನ್ನು ಕರೆದೊಯ್ಯಲು ಮಾತ್ರ ಅನುಮತಿ ನೀಡಲಾಗಿದೆ. 10 ಆಸನಗಳ ಟ್ಯಾಕ್ಸಿ ಕ್ಯಾಬ್‌ನಲ್ಲಿ ಗರಿಷ್ಠ ನಾಲ್ವರು ಹಾಗೂ ಆಟೊದಲ್ಲಿ ಇಬ್ಬರು ಪ್ರಯಾಣಿಸಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾರುಕಟ್ಟೆ ಪ್ರದೇಶದಲ್ಲಿ ಸರದಿ ಪ್ರಕಾರ ಮಳಿಗೆಗಳನ್ನು ತೆರೆಯಲು ಮತ್ತು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ನಿರ್ಧರಿಸಲಾಗಿದೆ. ಇದಕ್ಕೆ ವ್ಯಾಪಾರಸ್ಥರು ಒಪ್ಪಿಗೆ ನೀಡಿದ್ದಾರೆ ಎಂದು ವ್ಯಾಪಾರಿಗಳ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್‌ನಲ್ಲಿ ಲಾಕ್‌ಡೌನ್‌ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಶುರುವಾಗಿದೆ. ಜುಲೈ 22ರಿಂದ ಕಾಶ್ಮೀರದಲ್ಲಿ ಎರಡನೇ ಹಂತದ ಲಾಕ್‌ಡೌನ್‌ ಶುರುವಾಗಿದೆ. ಇದರ ಮಧ್ಯೆಯೂ ಕೆಲವು ಷರತ್ತುಗಳಿಗೆ ಒಳಪಟ್ಟು ಶೇ 50ರಷ್ಟು ಮಳಿಗೆಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಅನಿರ್ದಿಷ್ಟ ಕಾಲ ಲಾಕ್‌ಡೌನ್‌ ಘೋಷಣೆ ಮಾಡುವ ಮೂಲಕ ಜನರನ್ನು ‘ಶಿಕ್ಷಿಸ’ಲಾಗುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು