ಶನಿವಾರ, ಸೆಪ್ಟೆಂಬರ್ 26, 2020
22 °C

ನರೇಂದ್ರ ಮೋದಿ ಅವರನ್ನು ಹೊಗಳಿದ ಶಾಸಕ ಕು.ಕ.ಸೆಲ್ವಂ ವಿರುದ್ಧ ಡಿಎಂಕೆ ಕ್ರಮ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾದ ಮರುದಿನವೇ ಡಿಎಂಕೆ ಶಾಸಕ ಕು.ಕ.ಸೆಲ್ವಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದ್ದು, ಪಕ್ಷದ ಹುದ್ದೆಗಳಿಂದ ಬಿಡುಗಡೆಗೊಳಿಸಲಾಗಿದೆ.

ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಏಕೆ ತೆಗೆಯಬಾರದು ಎಂಬುದಕ್ಕೆ ವಿವರಣೆ ನೀಡುವಂತೆ ಶಾಸಕರಿಗೆ ನೋಟಿಸ್‌ ಕಳುಹಿಸಲಾಗಿದೆ. 

‘ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಜೊತೆಗೆ ಪಕ್ಷಕ್ಕೆ ಅಪಖ್ಯಾತಿ ಉಂಟುಮಾಡಿರುವುದರಿಂದ ಸೆಲ್ವಂ ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ, ಅವರ ವಿವರಣೆಯನ್ನು ಕೇಳಲಾಗಿದೆ’ ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್‌ ತಿಳಿಸಿದ್ದಾರೆ. 

ಕಳೆದ ಮಂಗಳವಾರ ದೆಹಲಿಗೆ ಭೇಟಿ ನೀಡಿದ್ದ ಶಾಸಕ ಸೆಲ್ವಂ, ಮೋದಿ ನೇತೃತ್ವದ ಆಡಳಿತಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದರು. ಅಲ್ಲದೇ ರಾಮ ಮಂದಿರ ನಿರ್ಮಿಸುವ ಅವರ ಪ್ರಯತ್ನಗಳಿಗಾಗಿ ಶುಭಾಶಯ ಕೋರಿದ್ದರು. ಇದೇ ವೇಳೆ ಅವರು ನಡ್ಡಾ ಅವರನ್ನು ಭೇಟಿ ಮಾಡಿದ್ದರು. 

ಬಿಜೆಪಿ ಪಕ್ಷಾಂತರಗೊಳ್ಳುವ ಉದ್ದೇಶದಿಂದ ದೆಹಲಿಗೆ ಭೇಟಿ ನೀಡಿರುವ ವದಂತಿಯನ್ನು ತಳ್ಳಿಹಾಕಿರುವ ಸೆಲ್ವಂ, ‘ಕ್ಷೇತ್ರದ ಯೋಜನೆಗಳ ಕುರಿತು ಚರ್ಚಿಸುವ ಸಲುವಾಗಿ ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಲು ಹೋಗಿದ್ದೆ. ಇದೇ ವೇಳೆ ಜೆ.ಪಿ ನಡ್ಡಾ ಅವರನ್ನು ಭೇಟಿ ಆಗುವ ಅವಕಾಶ ದೊರೆಯಿತು ಎಂದು ಪ್ರತಿಕ್ರಿಯಿಸಿದ್ದಾರೆ. 

ರಾಮೇಶ್ವರಂ ಸೇರಿದಂತೆ ರಾಮನಿಗೆ ಸಂಬಂಧಿಸಿದ ಕ್ಷೇತ್ರಗಳನ್ನು ಅಯೋಧ್ಯೆಯ ಮಾದರಿಯಲ್ಲಿಯೇ ಅಭಿವೃದ್ಧಿ ಮಾಡುವಂತೆ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು