ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಜಿ-23 ನಾಯಕರ ಸಭೆ: ಭೂಪಿಂದರ್‌ ಸಿಂಗ್‌ ಹೂಡಾ ಭೇಟಿಯಾದ ರಾಹುಲ್ ಗಾಂಧಿ

Last Updated 17 ಮಾರ್ಚ್ 2022, 10:16 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ನ ಜಿ-23 ನಾಯಕರು ಸಭೆ ನಡೆಸಿದ ಬೆನ್ನಲ್ಲೇ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹರಿಯಾಣದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಭೂಪಿಂದರ್‌ ಸಿಂಗ್‌ ಹೂಡಾ ಅವರನ್ನು ಗುರುವಾರ ಭೇಟಿಯಾಗಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿನ ಸೋಲಿನ ಕುರಿತು ಆತ್ಮಾವಲೋಕನ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್‌ನ ‘ಜಿ-23’ ನಾಯಕರು ಗುಲಾಮ್‌ ನಭಿ ಆಜಾದ್‌ ಅವರ ನಿವಾಸದಲ್ಲಿ ಬುಧವಾರ ಸಭೆ ನಡೆಸಿದ್ದರು.ಈ ಬೆಳವಣಿಗೆ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಭೂಪಿಂದರ್‌ ಸಿಂಗ್‌ ಹೂಡಾ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಹಿರಿಯ ಮುಖಂಡ ಗುಲಾಂ ನಬಿ ಆಜಾದ್‌ ಅವರ ನಿವಾಸಕ್ಕೂ ರಾಹುಲ್ ಭೇಟಿ ನೀಡಿ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಎಲ್ಲಾ ಹಂತಗಳಲ್ಲಿ ನಿರ್ಧಾರ ಕೈಗೊಳ್ಳುವಾಗ ‘ಎಲ್ಲರನ್ನು ಒಳಗೊಳ್ಳುವ ಹಾಗೂ ಸಾಮೂಹಿಕ ನಾಯಕತ್ವ’ ಮಾದರಿಯನ್ನು ಅಳವಡಿಸಿಕೊಳ್ಳುವುದೊಂದೇ ಪಕ್ಷವನ್ನು ಮುನ್ನಡೆಸಲು ಬೇಕಾಗಿರುವ ಮಾರ್ಗ’ ಎಂದು ಕಾಂಗ್ರೆಸ್‌ನ ಜಿ-23 ನಾಯಕರು ಬುಧವಾರ ಪ್ರತಿಪಾದಿಸಿದ್ದರು.

‘ಸಮಾನ ಮನಸ್ಕ ಪಕ್ಷಗಳ ಜತೆ ಮಾತುಕತೆ ನಡೆಸುವ ಮೂಲಕ 2024ರ ಲೋಕಸಭಾ ಚುನಾವಣೆ ವೇಳೆಗೆ ಪರ್ಯಾಯ ರಂಗ ರಚನೆಗೆ ಪಕ್ಷ ಮುಂದಾಗಬೇಕು ಎಂದು ನಾಯಕತ್ವವನ್ನು ಒತ್ತಾಯಿಸಲಾಯಿತು’ ಎಂದು ಸಭೆ ನಂತರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

ಮುಖಂಡರಾದ ಕಪಿಲ್‌ ಸಿಬಲ್, ಆನಂದ ಶರ್ಮಾ,ಭೂಪಿಂದರ್‌ ಸಿಂಗ್‌ ಹೂಡಾ, ಪೃಥ್ವಿರಾಜ್ ಚವಾಣ್, ಮನೀಷ್‌ ತಿವಾರಿ, ಶಶಿ ತರೂರ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT