ಚೆನ್ನೈ: ಜಲಾಶಯಗಳ ನೀರಿನ ಮಟ್ಟ ಹೆಚ್ಚಳ

ಚೆನ್ನೈ: ಕಳೆದ ಕೆಲ ದಿನಗಳಿಂದ ರಾಜ್ಯದ ಕೆಲ ಭಾಗಗಳಲ್ಲಿ ಅಬ್ಬರಿಸಿದ್ದ ಮಳೆ, ಬುಧವಾರ ಬಿಡುವು ನೀಡಿತು. ಆದರೆ, ನಗರದ ಕೆಲ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದ ಕಾರಣ
ವಾಹನಗಳ ಸಂಚಾರಕ್ಕೆ ತೊಂದರೆ
ಯಾಯಿತು. ವಸತಿ ಪ್ರದೇಶಗಳಲ್ಲಿಯೂ
ನೀರು ನುಗ್ಗಿತು.
ಚೆನ್ನೈ ನಗರಕ್ಕೆ ನೀರು ಪೂರೈಕೆ ಮಾಡುವ ಪುಳಲ್ ಹಾಗೂ ಚೆಂಬರಂಬಕ್ಕಂ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ದಿಢೀರ್ ಹೆಚ್ಚಳ ಕಂಡುಬಂದ ಕಾರಣ, ಈ ಅಣೆಕಟ್ಟುಗಳಿಂದ ನೀರನ್ನು ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚೆನ್ನೈ ಮತ್ತು ತಿರುವಳ್ಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರೆ, ಕಾಂಚೀಪುರಂ, ಚೆಂಗಲ್‌ಪಟ್ಟು, ರಾಣಿಪೇಟ್, ವಿಲ್ಲುಪುರಂ ಮತ್ತು ವೆಲ್ಲೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಎಳಿಲಗಂನಲ್ಲಿರುವ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರಕ್ಕೆ ಭೇಟಿ ನೀಡಿ, ಪರಿಹಾರ ಮತ್ತು ರಕ್ಷಣಾ ಕಾರ್ಯ ಕುರಿತು ಮಾಹಿತಿ ಪಡೆದರು.
‘ಮಳೆ ನೀರು ಸರಾಗವಾಗಿ ಹರಿದು
ಹೋಗುವಂತೆ ಮಾಡಲು ತ್ವರಿತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಚೆನ್ನೈ ನಗರ ಶೀಘ್ರವೇ ಪ್ರವಾಹ ಪರಿಸ್ಥಿತಿ ಮುಕ್ತವಾಗಲಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.