ಶನಿವಾರ, ಅಕ್ಟೋಬರ್ 31, 2020
19 °C

ಕೇರಳ ಚಿನ್ನ ಸಾಗಣೆ: ಖರ್ಜೂರ ವಿತರಣೆ ಕುರಿತೂ ತನಿಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರ: ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳ ಸಾಗಣೆ ನಡೆಸಿರುವ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳು ಇದೀಗ ತಿರುವನಂತಪುರದ ಯುಎಇ ರಾಯಭಾರ ಕಚೇರಿ ವಿತರಿಸಿರುವ ಖರ್ಜೂರವನ್ನು ಪಡೆದುಕೊಂಡಿರುವ ಸಂಸ್ಥೆಗಳ ಮೇಲೂ ಕಣ್ಣಿಟ್ಟಿವೆ.

 2017 ಮೇ ತಿಂಗಳಲ್ಲಿ ನಡೆದ ಕಾರ್ಯಕ್ರದಲ್ಲಿ ಯುಎಇ ಅಧ್ಯಕ್ಷ ಶೇಖ್‌ ಖಲೀಫಾ ಬಿನ್‌ ಝಯೇದ್‌ ಅಲ್‌ ನಹ್ಯಾನ್‌ ಅವರು ವಿಶೇಷ ಮಕ್ಕಳ ಶಾಲೆ, ಅನಾಥಾಶ್ರಮ ಸೇರಿದಂತೆ ವಿವಿಧ ಸಂಸ್ಥೆಗಳ ಸುಮಾರು 40 ಸಾವಿರ ಬಡ ಮಕ್ಕಳಿಗೆ ಉತ್ತಮ ಗುಣಮಟ್ಟದ ಖರ್ಜೂರ ವಿತರಿಸಿದ್ದರು. ಸುಮಾರು 18 ಸಾವಿರ ಕಿ.ಗ್ರಾಂ. ಖರ್ಜೂರವನ್ನು ವಿತರಿಸಲಾಗಿತ್ತು.

ಚಿನ್ನ ಸಾಗಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸ್ವಪ್ನಾ ಸುರೇಶ್ ಅವರು ಆಗ ಯುಎಇ ರಾಯಭಾರ ಕಚೇರಿಯ ಸಿಬ್ಬಂದಿಯಾಗಿದ್ದರು ಮತ್ತು ಈ ಕಾರ್ಯಕ್ರಮ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

 ಚಿನ್ನ ಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳು ಇದೀಗ ಖರ್ಜೂರ ವಿತರಣೆ ಕುರಿತೂ ಮಾಹಿತಿ ಕಲೆಹಾಕುತ್ತಿವೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು