ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶಕ್ಕೆ ಸುಶಿಕ್ಷಿತ ಪ್ರಧಾನಿಯ ಅಗತ್ಯವಿದೆ: ಅರವಿಂದ ಕೇಜ್ರಿವಾಲ್

Last Updated 14 ಮಾರ್ಚ್ 2023, 14:31 IST
ಅಕ್ಷರ ಗಾತ್ರ

ಭೋಪಾಲ್‌: ‘ದೇಶಕ್ಕೆ ಸುಶಿಕ್ಷಿತ ಪ್ರಧಾನಿಯ ಅಗತ್ಯವಿದೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹಿಮಾಚಲ ಪ್ರದೇಶದಲ್ಲಿ ಮಂಗಳವಾರ ಎಂದು ಹೇಳಿದರು.

ಜನಸಭೆಯಲ್ಲಿ ಮಾತನಾಡಿದ ಅವರು, ‘ದೆಹಲಿಯ ಮಾಜಿ ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಬಂಧನದ ನಂತರ ಶಿಕ್ಷಣದ ಮಹತ್ವವನ್ನು ಅರ್ಥೈಸಿಕೊಳ್ಳಲು ಶಿಕ್ಷಿತ ಪ್ರಧಾನಿಯ ಅಗತ್ಯವಿದೆ ಎಂದನಿಸಿತು’ ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

‘ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್‌, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯ ಒದಗಿಸುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ರಾಜ್ಯದಲ್ಲಿ ಕ್ರಮವಾಗಿ 40 ಮತ್ತು 35 ವರ್ಷ ಅಧಿಕಾರದಲ್ಲಿ ಇದ್ದರೂ ಅವಕಾಶವನ್ನು ಸದುಪಯೋಗಪಡಿಸಿಕೊಂಡಿಲ್ಲ. ಈ ಬಾರಿ ಎಎಪಿಗೆ ಅವಕಾಶ ನೀಡಿ’ ಎಂದು ಮನವಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT