ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಮತ್ತೆ ಕಂಪಿಸಿದ ಭೂಮಿ: 2.7 ತೀವ್ರತೆಯ ಭೂಕಂಪ

Last Updated 22 ಮಾರ್ಚ್ 2023, 14:39 IST
ಅಕ್ಷರ ಗಾತ್ರ

ದೆಹಲಿ: ದೆಹಲಿಯಲ್ಲಿ ಬುಧವಾರ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.

ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಸಂಜೆ 4.44ರ ಸುಮಾರಿಗೆ ಕಂಪನ ಉಂಟಾಗಿದ್ದು, ಪಶ್ಚಿಮ ದೆಹಲಿಯಿಂದ 5 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಹೇಳಿದೆ.

ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನದಲ್ಲಿ ಮಂಗಳವಾರ ರಾತ್ರಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ.

ದೆಹಲಿ ಎನ್‌ಸಿಆರ್‌ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಮಂಗಳವಾರ ರಾತ್ರಿ ಕಂಪನದ ಅನುಭವವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT