ಶನಿವಾರ, ಸೆಪ್ಟೆಂಬರ್ 25, 2021
29 °C
ಕ್ಲಿನಿಕಲ್ ಅಧ್ಯಯನ ಸ್ಥಗಿತಗೊಳಿಸಿದ್ದ ಬಳಿಕ ನಿರ್ಧಾರ ಪ್ರಕಟಿಸಿದ ರಾಷ್ಟ್ರೀಯ ಆರೋಗ್ಯ ನಿಗಾ ಸಂಸ್ಥೆ

‘ಕೋವ್ಯಾಕ್ಸಿನ್‌’ ಆಮದು ರದ್ದುಪಡಿಸಿದ ಬ್ರೆಜಿಲ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್‌: ಭಾರತ್‌ ಬಯೊಟೆಕ್‌ನ ಕೋವಿಡ್‌–19 ‘ಕೋವ್ಯಾಕ್ಸಿನ್‌’ ಲಸಿಕೆಯ 40 ಲಕ್ಷ ಡೋಸ್‌ಗಳನ್ನು ಆಮದು ಮಾಡಿಕೊಳ್ಳುವ ನಿರ್ಧಾರವನ್ನು ಬ್ರೆಜಿಲ್‌ ರದ್ದುಗೊಳಿಸಿದೆ.

‘ಕೋವ್ಯಾಕ್ಸಿನ್‌’ನ ಕ್ಲಿನಿಕಲ್ ಅಧ್ಯಯನವನ್ನು ಸ್ಥಗಿತಗೊಳಿಸಿದ ಬೆನ್ನಲ್ಲೇ ಬ್ರೆಜಿಲ್‌ ಈ ಕ್ರಮಕೈಗೊಂಡಿದೆ.

ಬ್ರೆಜಿಲ್‌ನ ಪ್ರೆಸಿಸಾ ಮೆಡಿಸಿಮೆಂಟೋಸ್ ಮತ್ತು ಎನ್ವಿಕ್ಸಿಯಾ ಫಾರ್ಮಾಸ್ಯುಟಿಕಲ್ಸ್ ಎಲ್ಎಲ್‌ಸಿ ಜತೆಗಿನ ಒಪ್ಪಂದವನ್ನು ರದ್ದುಗೊಳಿಸಲಾಗಿದೆ ಎಂದು ಭಾರತ್ ಬಯೋಟೆಕ್ ಕಂಪನಿ ಜುಲೈ 23ರಂದು ಬ್ರೆಜಿಲ್‌ ಸರ್ಕಾರಕ್ಕೆ ತಿಳಿಸಿತ್ತು. ಬ್ರೆಜಿಲ್‌ನಲ್ಲಿ ಕೋವ್ಯಾಕ್ಸಿನ್‌ ಪರಿಚಯಿಸುವ ಉದ್ದೇಶದಿಂದ ಭಾರತ್‌ ಬಯೋಟೆಕ್‌ ಈ ಎರಡೂ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿತ್ತು.

ಭಾರತ್ ಬಯೋಟೆಕ್ ತನ್ನ ನಿರ್ಧಾರ ಪ್ರಕಟಿಸಿದ ಬಳಿಕ ಬ್ರೆಜಿಲ್‌ನ ರಾಷ್ಟ್ರೀಯ ಆರೋಗ್ಯ ನಿಗಾ ಸಂಸ್ಥೆಯು ‘ಕೋವ್ಯಾಕ್ಸಿನ್‌’ ಆಮದು ಮಾಡಿಕೊಳ್ಳುವುದನ್ನು ರದ್ದುಪಡಿಸುವುದಾಗಿ ತಿಳಿಸಿದೆ.

ಎರಡು ಕೋಟಿ ಡೋಸ್‌ ‘ಕೋವ್ಯಾಕ್ಸಿನ್‌’ ಪೂರೈಕೆಗೆ ಸಂಬಂಧಿಸಿದಂತೆ ಬ್ರೆಜಿಲ್‌ ಸರ್ಕಾರದ ಜತೆ ಮಾಡಿಕೊಳ್ಳಲಾದ ಒಪ್ಪಂದವು ವಿವಾದಕ್ಕೀಡಾಗಿತ್ತು. ಈ ಬಗ್ಗೆ ಬ್ರೆಜಿಲ್‌ನಲ್ಲಿ ಅಧಿಕಾರಿಗಳು ತನಿಖೆಯನ್ನು ಕೈಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು