ಗುರುವಾರ , ಮಾರ್ಚ್ 23, 2023
31 °C

ಮೇಕೆದಾಟು ಯೋಜನೆಗೆ ಪುದುಚೇರಿ ವಿರೋಧ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪುದಚೇರಿ: ಮೇಕೆದಾಟುವಿನಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟು ಯೋಜನೆಗೆ ತಮಿಳುನಾಡಿನ ನಂತರ ಪುದುಚೇರಿಯ ಎಐಎನ್‌ಆರ್‌ಸಿ ನೇತೃತ್ವದ ಎನ್‌ಡಿಎ ಸರ್ಕಾರವು ವಿರೋಧ ವ್ಯಕ್ತಪಡಿಸಲು ನಿರ್ಧರಿಸಿದೆ ಎಂದು ಬುಧವಾರ ಅಧಿಕೃತ ಮೂಲಗಳು ತಿಳಿಸಿವೆ.

ಈ ವಿಷಯದಲ್ಲಿ ಕೇಂದ್ರದ ಹಸ್ತಕ್ಷೇಪವನ್ನು ಕೋರಿ ಪುದುಚೇರಿಯ ಮುಖ್ಯಮಂತ್ರಿ ಎನ್. ರಂಗಸಾಮಿ ಅವರು ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆಯಲಿದ್ದಾರೆ. ಅಂದಾಜು ₹ 9 ಸಾವಿರ ಕೋಟಿ ವೆಚ್ಚದ ಜಲಾಶಯವನ್ನು ನಿರ್ಮಿಸಲು ಕರ್ನಾಟಕಕ್ಕೆ ಅನುಮತಿ ನೀಡದಂತೆ ಅವರು ಪತ್ರದಲ್ಲಿ ಕೋರಲಿದ್ದಾರೆ ಎಂದೂ ಮೂಲಗಳು ಹೇಳಿವೆ.

ಈ ಕುರಿತು ಬುಧವಾರ ರಂಗಸಾಮಿ ಅವರು ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ್ದು, ಕೇಂದ್ರಕ್ಕೆ ಪತ್ರ ಬರೆಯಲು ನಿರ್ಧರಿಸಿದ್ದಾರೆ.

‘ಒಂದು ವೇಳೆ ಕರ್ನಾಟಕವು ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಿದರೆ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಯಲಿದೆ. ಆದರೆ, ಕೃಷಿ ಚಟುವಟಿಕೆಗಳಿಗಾಗಿ ಕಾವೇರಿ ನದಿ ನೀರಿನ ಮೇಲೆ ಅವಲಂಬಿತವಾಗಿರುವ ಪುದುಚೇರಿಯ ಕಾರೈಕಲ್ ಪ್ರದೇಶದ ಮೇಲೆ ಹೊಡೆತ ಬೀಳಲಿದೆ’ ಎಂಬ ಅಭಿಪ್ರಾಯವು ಸಭೆಯಲ್ಲಿ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು