ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಆಕ್ರಮಣಕಾರಿ ರಾಜಕೀಯ: ಸಚಿನ್ ಪೈಲಟ್

Last Updated 8 ಫೆಬ್ರುವರಿ 2022, 4:36 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ಆಕ್ರಮಣಕಾರಿ ರಾಜಕೀಯ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವವು ವಿಭಿನ್ನ ವಿಚಾರಧಾರೆಗಳು ಮತ್ತು ಚಿಂತನೆಯ ಜನರು ತಮ್ಮದೇ ಆದ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ವೇದಿಕೆಯಾಗಿದೆ ಮತ್ತು ಯಾರು ಸರಿ ಮತ್ತು ಯಾರು ತಪ್ಪು ಎಂದು ಸಾರ್ವಜನಿಕರು ನಿರ್ಧರಿಸುತ್ತಾರೆ ಎಂದು ಅವರು ಹೇಳಿದರು.

‘ನಾವು ಪರಸ್ಪರ ವಿರೋಧಿಸುವುದು, ವಾದ ಮಾಡುವುದು ಆರೋಗ್ಯಕರ ಸಂಪ್ರದಾಯವಾಗಿದೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದರೂ ನಾವು ಸುಸಂಸ್ಕೃತ ಭಾಷೆಯನ್ನು ಬಳಸಬೇಕು ಮತ್ತು ರಾಜಕೀಯದಲ್ಲಿ ಹಿಂಸೆಗೆ ಯಾವುದೇ ಸ್ಥಾನವಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ರಾಜಸ್ಥಾನದಲ್ಲಿ ಬಾಕಿ ಉಳಿದಿರುವ ಸಚಿವ ಸ್ಥಾನಗಳ ಭರ್ತಿ ಕುರಿತು ಪ್ರತಿಕ್ರಿಯಿಸಿದ ಪೈಲಟ್, ಎಲ್ಲರಿಗೂ ಮಂತ್ರಿ ಅಥವಾ ಇತರ ದೊಡ್ಡ ಹುದ್ದೆಯನ್ನು ನೀಡಲಾಗುವುದಿಲ್ಲ ಆದರೆ ಸರ್ಕಾರದಲ್ಲಿ ಅವರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ಹೇಳಿದರು.

ಇತ್ತೀಚಿನ ಎರಡು-ಮೂರು ತಿಂಗಳಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿಯನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ಕೆಲವು ಹೆಜ್ಜೆಗಳನ್ನು ಇಟ್ಟಿದ್ದು, 2023ರಲ್ಲಿ ವಿಧಾನಸಭಾ ಚುನಾವಣೆ ನಡೆದಾಗ ಮತ್ತೆ ಕಾಂಗ್ರೆಸ್ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದರು.

ಆರ್‌ಇಇಟಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ಸರ್ಕಾರ ಮತ್ತು ಎಐಸಿಸಿ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿವೆ ಮತ್ತು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT