ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಪಥ ಪ್ರತಿಭಟನೆ: ಬಿಹಾರ ಬಿಜೆಪಿಯ 10 ನಾಯಕರಿಗೆ ‘ವೈ’ ಶ್ರೇಣಿ ಭದ್ರತೆ

ಅಕ್ಷರ ಗಾತ್ರ

ನವದೆಹಲಿ: ಸಶಸ್ತ್ರ ಪಡೆಗಳ ನೂತನ ನೇಮಕಾತಿ ಯೋಜನೆ ‘ಅಗ್ನಿಪಥ’ ವಿರುದ್ಧದ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಬಿಹಾರ ಬಿಜೆಪಿಯ 10 ನಾಯಕರಿಗೆ ಕೇಂದ್ರ ಸರ್ಕಾರ ‘ವೈ’ ಶ್ರೇಣಿಯ ಭದ್ರತೆ ಒದಗಿಸಿದೆ.

ಬಿಹಾರದ ಉಪ ಮುಖ್ಯಮಂತ್ರಿ, ಶಾಸಕರು ಸೇರಿದಂತೆ 10 ಮಂದಿ ನಾಯಕರಿಗೆ ‘ವೈ’ ಶ್ರೇಣಿಯ ಭದ್ರತೆ ಒದಗಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ, ಈ ನಾಯಕರ ಭದ್ರತೆಯನ್ನು ಇಂದಿನಿಂದ (ಶನಿವಾರ) ಸಿಆರ್‌ಪಿಎಫ್‌ ಯೋಧರು ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

‘ಅಗ್ನಿಪಥ’ ವಿರುದ್ಧದ ಪ್ರತಿಭಟನೆ ವೇಳೆ ಶುಕ್ರವಾರ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆತಿಯಾದಲ್ಲಿರುವ ಉಪಮುಖ್ಯಮಂತ್ರಿ ರೇಣು ದೇವಿ ಅವರ ಮನೆ ಮೇಲೆ ದಾಳಿ ನಡೆದಿತ್ತು. ಇದೇ ಪ್ರದೇಶದಲ್ಲಿರುವ ಬಿಹಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಂಜಯ್ ಜೈಸ್ವಾಲ್ ಅವರ ನಿವಾಸದ ಮೇಲೆಯೂ ದಾಳಿ ನಡೆದಿತ್ತು. ಆಡಳಿತ ಪಕ್ಷ ಹಾಗೂ ಬಿಜೆಪಿ ಮುಖಂಡರ ಮನೆಗಳನ್ನು ಗುರಿಯಾಗಿಸಿ ದಾಳಿಗಳು ನಡೆದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT