ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಪಥ: ಪ್ರತಿಭಟನೆ, ಹಾನಿ ಮಾಡಿದವರಿಂದಲೇ ನಷ್ಟ ವಸೂಲಿಗೆ ಕ್ರಮ

Last Updated 21 ಜೂನ್ 2022, 12:59 IST
ಅಕ್ಷರ ಗಾತ್ರ

ವಾರಾಣಸಿ: ಅಗ್ನಿಪಥ ವಿರುದ್ಧದ ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿಗೆ ಆಗಿರುವ ನಷ್ಟವನ್ನು ಪ್ರತಿಭಟನಕಾರರಿಂದಲೇ ವಸೂಲಿ ಮಾಡಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರನ್ನು ಗುರುತಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ.

ಜಿಲ್ಲಾಧಿಕಾರಿ ಕೌಶಲ್ ರಾಜ್‌ ಶರ್ಮಾ ಅವರು, ‘ಜೂನ್‌ 17ರಂದು ನಡೆದಿದ್ದ ಪ್ರತಿಭಟನೆ ವೇಳೆ 36 ಬಸ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು. ಒಟ್ಟು ₹ 12.97 ಲಕ್ಷ ನಷ್ಟವಾಗಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಈವರೆಗೆ 27 ಜನರನ್ನು ಬಂಧಿಸಲಾಗಿದೆ. ಉಳಿದವರನ್ನು ಗುರುತಿಸುವ ಕಾರ್ಯ ನಡೆದಿದೆ’ ಎಂದು ತಿಳಿಸಿದರು.

ಯುವಜನರು ಇಂತಹ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಲ್ಲಿ, ಭವಿಷ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅವಕಾಶ ಕಳೆದುಕೊಳ್ಳಲಿದ್ದಾರೆ. ಅಲ್ಲದೆ, ಆಗಿರುವ ನಷ್ಟವನ್ನು ಅವರೇ ಭರಿಸಬೇಕಾಗುತ್ತದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT