ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಪಥ ಯೋಜನೆಯಡಿ ಶೀಘ್ರವೇ 40 ಸಾವಿರ ಯೋಧರ ನೇಮಕ

ದೇಶದ 773 ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ
Last Updated 15 ಜೂನ್ 2022, 13:54 IST
ಅಕ್ಷರ ಗಾತ್ರ

ನವದೆಹಲಿ: ‘ಅಗ್ನಿಪಥ’ ಯೋಜನೆಯಡಿ ಮುಂದಿನ ತಿಂಗಳುಗಳಲ್ಲಿ 40,000 ಯೋಧರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದುಕೇಂದ್ರ ಸರ್ಕಾರ ತಿಳಿಸಿದೆ.

ಅಗ್ನಿಪಥ ಯೋಜನೆಯಡಿ ಭೂಸೇನೆ,ನೌಕಾಪಡೆ ಮತ್ತು ವಾಯುಪಡೆಗಳಿಗೆ 4 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿಸೈನಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಂಗಳವಾರವಷ್ಟೇ ಘೋಷಣೆ ಮಾಡಿತ್ತು.

ಈ ಸಂಬಂಧ ಬುಧವಾರ ಮಾತನಾಡಿದ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಬಿ.ಎಸ್. ರಾಜು ಅವರು, ‘ಮುಂದಿನ 180 ದಿನಗಳಲ್ಲಿ 25,000 ಅಗ್ನಿವೀರರನ್ನು ಭಾರತೀಯ ಸೇನೆಗೆ ನೇಮಿಸಿಕೊಳ್ಳಲಾಗುತ್ತದೆ. ಬಳಿಕ ಉಳಿದ 15,000 ಸೈನಿಕರ ನೇಮಕಾತಿಗೆ ಪ್ರಕ್ರಿಯೆ ಆರಂಭವಾಗಲಿದೆ. ದೇಶದಾದ್ಯಂತ 773 ಜಿಲ್ಲೆಗಳಲ್ಲಿ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ’ ಎಂದು ತಿಳಿಸಿದರು.

ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲಾ ಬದಲಾವಣೆಗೆ ರಕ್ಷಣಾ ಸಚಿವರು ಅಧಿಕಾರ ನೀಡಿದ್ದಾರೆ ಎಂದು ಇದೇ ವೇಳೆ ಹೇಳಿದ್ದಾರೆ.

ಯೋಜನೆಯಡಿ ಹದಿನೇಳುವರೆ ವರ್ಷದಿಂದ 21 ವರ್ಷದವರೆಗಿನ 46,000 ಯೋಧರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT