ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಪಥ ಯೋಜನೆ ವಿರುದ್ಧ ಅರ್ಜಿ: ಫೆ.27 ರಂದು ದೆಹಲಿ ಹೈಕೋರ್ಟ್‌ ತೀರ್ಪು ಸಾಧ್ಯತೆ

Last Updated 25 ಫೆಬ್ರುವರಿ 2023, 5:07 IST
ಅಕ್ಷರ ಗಾತ್ರ

ನವದೆಹಲಿ: ಸಶಸ್ತ್ರ ಪಡೆಗಳಿಗೆ ತಾತ್ಕಾಲಿಕ ಅವಧಿಗೆ ನೇಮಕಾತಿ ಮಾಡುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ತೀರ್ಪನ್ನು ದೆಹಲಿ ಹೈಕೋರ್ಟ್‌ ಫೆಬ್ರವರಿ 27ರಂದು ಪ್ರಕಟಿಸುವ ನಿರೀಕ್ಷೆ ಇದೆ.

ಮುಖ್ಯನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಹಾಗೂ ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್‌ ಅವರಿದ್ದ ಪೀಠವು 2022ರ ಡಿಸೆಂಬರ್ 15 ರಂದು ವಿಚಾರಣೆ ಪೂರ್ಣಗೊಳಿಸಿ, ತೀರ್ಪನ್ನು ಕಾಯ್ದಿರಿಸಿತ್ತು.

ದೆಹಲಿ ಹೈಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿರುವ ಕಾರಣ ಪಟ್ಟಿಯ ಪ್ರಕಾರ, ಪ್ರಕರಣದ ತೀರ್ಪು ಫೆಬ್ರವರಿ 27ರ ಸೋಮವಾರ ಬೆಳಿಗ್ಗೆ 10.30ಕ್ಕೆ ಪ್ರಕಟವಾಗಲಿದೆ.

ಹದಿನೇಳುವರೆ ವರ್ಷದಿಂದ 21 ವರ್ಷದ ವರೆಗಿನ ಯುವಕರನ್ನು 4 ವರ್ಷದ ಮಟ್ಟಿಗೆ ಸಶಸ್ತ್ರ ಪಡೆಗಳಿಗೆ ನೇಮಕ ಮಾಡುವ ಅಗ್ನಿಪಥ್ ಯೋಜನೆಯನ್ನು ಕೇಂದ್ರ ಸರ್ಕಾರ 2022ರ ಜೂನ್‌ 14 ರಂದು ಜಾರಿಗೆ ತಂದಿತ್ತು. ಇದು ಸೇನೆಗೆ ಸೇರುವ ಆಕಾಂಕ್ಷಿಗಳ ಪ್ರತಿಭಟನೆಗೂ ಕಾರಣವಾಗಿತ್ತು.

ಇದಾದ ಬಳಿಕ ಗರಿಷ್ಠ ವಯೋಮಾನವನ್ನು ಸರ್ಕಾರ 23ಕ್ಕೆ ಏರಿಕೆ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT