ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ: ಬಿಹಾರದಲ್ಲಿ ಶಾಲಾ ಬಸ್‌ಗೂ ತಟ್ಟಿದ ‘ಅಗ್ನಿಪಥ’ ಪ್ರತಿಭಟನೆಯ ಬಿಸಿ

ಅಕ್ಷರ ಗಾತ್ರ

ಪಟ್ನಾ: ಸೈನಿಕರ ನೇಮಕಾತಿಯ ಹೊಸ ನೀತಿ ‘ಅಗ್ನಿಪಥ ಯೋಜನೆ’ ವಿರುದ್ಧದ ಪ್ರತಿಭಟನೆಯ ಕಾವು ಬಿಹಾರದಲ್ಲಿ ಶಾಲಾ ಮಕ್ಕಳ ಬಸ್‌ಗೂ ತಟ್ಟಿದೆ.

ಬಿಹಾರದ ದರ್ಭಾಂಗದಲ್ಲಿ ಶುಕ್ರವಾರ ಪ್ರತಿಭಟನೆ ತೀವ್ರಗೊಂಡಿದ್ದು, ರಸ್ತೆ ತಡೆ ಮಾಡಲಾಗಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ರಸ್ತೆಯಲ್ಲಿ ಪ್ರತಿಭಟನಾಕಾರರ ಮಧ್ಯೆ ಸಿಕ್ಕಿಹಾಕಿಕೊಂಡಿದೆ. ಇದರಿಂದ ಹೆದರಿದ ಮಕ್ಕಳು ಅಳುತ್ತಿರುವ ದೃಶ್ಯವೂ ಕಂಡುಬಂತು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟರು ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ವಿಡಿಯೊ ಸಹಿತ ಟ್ವೀಟ್ ಮಾಡಿದೆ.

ಬಿಹಾರದ ಮೊಹಿಯುದ್ದೀನ್‌ ನಗರ, ಲಖಿಸರಾಯ್‌ ಜಂಕ್ಷನ್‌ ಸೇರಿದಂತೆ ಹಲವೆಡೆ ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ಉಪಮುಖ್ಯಮಂತ್ರಿ ರೇಣು ದೇವಿ ಅವರ ಮನೆ ಮೇಲೆಯೂ ದಾಳಿ ನಡೆದಿದೆ. ಬಿಜೆಪಿ ಬಿಹಾರ ಘಟಕದ ಅಧ್ಯಕ್ಷ ಸಂಜಯ್ ಜೈಸ್ವಾಲ್ ಅವರ, ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆತಿಯಾದಲ್ಲಿರುವ ನಿವಾಸದ ಮೇಲೆ ದಾಳಿ ನಡೆದಿದೆ. ಆಡಳಿತ ಪಕ್ಷ ಹಾಗೂ ಬಿಜೆಪಿ ಮುಖಂಡರ ಮನೆಗಳನ್ನು ಗುರಿಯಾಗಿಸಿ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT