ಭಾನುವಾರ, ಆಗಸ್ಟ್ 14, 2022
20 °C

'ಅಗ್ನಿಪಥ' ಬಗ್ಗೆ ಸುಳ್ಳು ಸುದ್ದಿ; 35 Whatsapp ಗ್ರೂಪ್ ನಿರ್ಬಂಧ, 10 ಜನರ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬಿಹಾರದಲ್ಲಿ ಅಗ್ನಿಪಥ ಯೋಜನೆಯ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿರುವುದು

ನವದೆಹಲಿ: ಸೇನಾ ನೇಮಕಾತಿಗಾಗಿ ಕೇಂದ್ರ ಸರ್ಕಾರ ಘೋಷಿಸಿರುವ 'ಅಗ್ನಿಪಥ' ಹೊಸ ಯೋಜನೆಯ ವಿರುದ್ಧ ಸುಳ್ಳು ಸುದ್ದಿ ಹರಡುತ್ತಿರುವ ಆರೋಪದ ಮೇಲೆ 35 ವಾಟ್ಸ್‌ಆ್ಯಪ್‌ ಗುಂಪುಗಳನ್ನು ನಿರ್ಬಂಧಿಸಲಾಗಿದೆ.

ವಾಟ್ಸ್‌ಆ್ಯಪ್‌ ಮೂಲಕ ಸುಳ್ಳು ಮಾಹಿತಿ ಹಬ್ಬಿಸುವುದು ಹಾಗೂ ಪ್ರತಿಭಟನೆಗಳನ್ನು ಆಯೋಜಿಸಿರುವ ಆರೋಪಗಳ ಮೇಲೆ ಕನಿಷ್ಠ 10 ಜನರನ್ನು ಬಂಧಿಸಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಹರಿದಾಡುತ್ತಿರುವ ಮಾಹಿತಿಯ ನೈಜತೆಯನ್ನು ತಿಳಿಯಲು 'ಫ್ಯಾಕ್ಟ್‌ಚೆಕ್‌ಗಾಗಿ' ವಾಟ್ಸ್‌ಆ್ಯಪ್‌ ಸಂಖ್ಯೆ (8799711259) ತೆರೆದಿರುವುದಾಗಿ ಹಿಂದುಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಅಗ್ನಿಪಥ ಯೋಜನೆಯನ್ನು ಖಂಡಿಸಿ ದೇಶದ ಹಲವು ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ರೈಲಿನ ಬೋಗಿಗಳಿಗೆ ಬೆಂಕಿ, ಸಾರ್ವಜನಿಕ ಆಸ್ತಿ–ಪಾಸ್ತಿ ಹಾನಿ, ರಸ್ತೆ ತಡೆ ನಡೆಸಲಾಗಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದು ಹಿಂಸಾಚಾರಕ್ಕೂ ಕಾರಣವಾಗಿದೆ. ಈ ನಡುವೆ ಸರ್ಕಾರವು 'ಸುಳ್ಳು ಸುದ್ದಿ' ತಡೆಯುವ ಕಾರ್ಯಾಚರಣೆ ನಡೆಸುತ್ತಿದೆ.

ಇದನ್ನೂ ಓದಿ–

ಈ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿರುವ ಆರೋಪದ ಮೇಲೆ 35 ವಾಟ್ಸ್‌ಆ್ಯಪ್‌ ಗುಂಪುಗಳನ್ನು ನಿರ್ಬಂಧಿಸಿರುವುದಾಗಿ ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ತಾರುಣ್ಯವನ್ನು ತರುವ ಯೋಜನೆಯ ಭಾಗ ಅಗ್ನಿಪಥ ಎಂದು ರಕ್ಷಣಾ ಪಡೆಗಳ ಉನ್ನತ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ. ಈ ಯೋಜನೆಯನ್ನು ಹಿಂಪಡೆಯುವುದಿಲ್ಲ ಎಂದೂ ಭಾನುವಾರ ಸ್ಪಷ್ಟಪಡಿಸಿದ್ದಾರೆ. 

ಇದನ್ನೂ ಓದಿ–

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು