ಮಂಗಳವಾರ, ನವೆಂಬರ್ 24, 2020
27 °C

ಕೃಷಿ ಕಾನೂನುಗಳು ರೈತರಿಗೆ ನೇರ ಮಾರುಕಟ್ಟೆ ಸಂಪರ್ಕ ಕಲ್ಪಿಸುತ್ತವೆ: ನರೇಂದ್ರ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Narendra modi

ಲಖನೌ: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ರೈತರಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಮಾರುಕಟ್ಟೆ ಮಾಡಲು ಅವಕಾಶ ಕಲ್ಪಿಸುತ್ತವೆ‘ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

‘ಈ ಕೃಷಿ ಕಾನೂನುಗಳಲ್ಲಾಗಿರುವ ಸುಧಾರಣೆಗಳು ರೈತರಿಗೆ ನೇರವಾದ ಲಾಭ ನೀಡುವುದರ ಜತೆಗೆ, ಮಧ್ಯವರ್ತಿ ವ್ಯವಸ್ಥೆಯನ್ನು ಮಾರುಕಟ್ಟೆ ವ್ಯಾಪ್ತಿಯಿಂದ ಹೊರಗಿಡುತ್ತವೆ‘ ಎಂದು ಅವರು ಹೇಳಿದರು.  

ವಾರಾಣಸಿಯ  ವಿವಿಧ ಯೋಜನೆಗಳ ಉದ್ಘಾಟನೆ ಬಳಿಕ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಕೇಂದ್ರ ಕೈಗೊಂಡಿರುವ ಜನಪರ ಯೋಜನೆಗಳ ಬಗ್ಗೆ ವಿವರಿಸಿದರು.

‘ಸ್ವಾಮಿತ್ವ ಯೋಜನೆಯಡಿ ರೈತರಿಗೆ ಆಸ್ತಿ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಇದರಿಂದ ಅವರಿಗೆ ಸಾಲ ಪಡೆಯಲು ಅಷ್ಟೇ ಅಲ್ಲದೇ, ಮಾತ್ರವಲ್ಲ, ಆಸ್ತಿ ಕಳೆದುಕೊಳ್ಳುವ ಸಂಭವವೂ ಕೊನೆಯಾಗುತ್ತದೆ‘ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು