ಬುಧವಾರ, ಅಕ್ಟೋಬರ್ 21, 2020
21 °C
ರಾಜ್ಯಸಭೆಯಲ್ಲಿ ಕೃಷಿ ಮಸೂದೆಗಳ ಮಂಡನೆ ವೇಳೆ ಕೃಷಿ ಸಚಿವ ಸ್ಪಷ್ಟನೆ

ಬೆಂಬಲ ಬೆಲೆ ಆಧಾರಿತ ಖರೀದಿ ಮುಂದುವರಿಯಲಿದೆ: ಕೇಂದ್ರ ಕೃಷಿ ಸಚಿವ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇತ್ತೀಚೆಗೆ ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಕೃಷಿ ಮಸೂದೆ ಅನುಷ್ಠಾನದ ನಂತರವೂ ಬೆಂಬಲ ಬೆಲೆ ನೀಡಿ ರೈತರಿಂದ ಕೃಷಿ ಉತ್ಪನ್ನ ಖರೀದಿಸುವುದನ್ನು ಮುಂದುವರಿಸಲಾಗುತ್ತದೆ. ಈ ಮಸೂದೆಗೂ ಬೆಂಬಲ ಬೆಲೆ ಆಧಾರಿತ ಖರೀದಿಗೂ ಸಂಬಂಧವಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟಪಡಿಸಿದ್ದಾರೆ.

ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರಗೊಂಡ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, ಬೆಲೆ ಖಾತರಿ ಮತ್ತು ಕೃಷಿ ಸೇವೆಗಳಿಗೆ ರೈತರ ಒಪ್ಪಿಗೆ (ಸಬಲೀಕರಣ ಮತ್ತು ರಕ್ಷಣೆ)  ಎಂಬ ಎರಡು ಮಸೂದೆಗಳನ್ನು ರಾಜ್ಯಸಭೆಯಲ್ಲಿ ಮಂಡಿಸುವ ವೇಳೆ ಅವರು ಈ ಮಾಹಿತಿ ನೀಡಿದ್ದಾರೆ.

ಎನ್‌ಡಿಎ ಮೈತ್ರಿ ಪಕ್ಷ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಹಾಗೂ ಪ್ರತಿಪಕ್ಷಗಳಾದ ಕಾಂಗ್ರೆಸ್‌, ಡಿಎಂಕೆ ಮತ್ತು ರೆವಲೂಷನರಿ ಸೋಷಿಯಲ್‌ಪಾರ್ಟಿ ಸದಸ್ಯರು ಕೃಷಿ ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿದ್ದರು. ಶಿರೋಮಣಿ ಅಕಾಲಿ ದಳ ಪಕ್ಷದ ಆಹಾರ ಸಂಸ್ಕರಣಾ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಕಳೆದ ವಾರ ಸರ್ಕಾರಕ್ಕೆ ರಾಜೀನಾಮೆ ನೀಡಿದ್ದರು.

ಕೆ ಕೆ ರಾಗೇಶ್ (ಸಿಪಿಐ), ಡೆರೆಕ್ ಒ'ಬ್ರಿಯೆನ್ (ಟಿಎಂಸಿ), ತಿರುಚಿ ಶಿವ (ಡಿಎಂಕೆ) ಮತ್ತು ಕೆ ಸಿ ವೇಣುಗೋಪಾಲ್ (ಕಾಂಗ್ರೆಸ್) ಈ ಎರಡು ಮಸೂದೆಗಳಿಗೆ ಅಂಗೀಕಾರ ನೀಡುವ ಮುನ್ನ ಸದನ ಸಮಿತಿಗೆ ಕಳುಹಿಸಬೇಕು ಎಂಬ ನಿರ್ಣಯವನ್ನು ಮಂಡಿಸಿದ್ದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು