ಶುಕ್ರವಾರ, ಅಕ್ಟೋಬರ್ 23, 2020
24 °C

ಕೃಷಿ ಕ್ಷೇತ್ರ ಸುಧಾರಣೆ: ಎರಡು ಮಸೂದೆ ಅಂಗೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಎನ್‌ಡಿಎ ಮೈತ್ರಿ ಪಕ್ಷ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಹಾಗೂ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ, ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಎರಡು ಮಸೂದೆಗಳನ್ನು ಲೋಕಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು.

ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, ಬೆಲೆ ಖಾತರಿ ಮತ್ತು ಕೃಷಿ ಸೇವೆಗಳಿಗೆ ರೈತರ ಒಪ್ಪಿಗೆ (ಸಬಲೀಕರಣ ಮತ್ತು ರಕ್ಷಣೆ) ಮಸೂದೆಗಳನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.

ಪ್ರತಿಪಕ್ಷಗಳಾದ ಕಾಂಗ್ರೆಸ್‌, ಡಿಎಂಕೆ ಹಾಗೂ ರೆವಲೂಷನರಿ ಸೋಷಿಯಲಿಸ್ಟ್‌ ಪಾರ್ಟಿ ಸದಸ್ಯರು, ಮಸೂದೆಗೆ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದರು.

ಅಗತ್ಯ ವಸ್ತುಗಳ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಗಿದೆ.  

ಐತಿಹಾಸಿಕ: ‘ಕೃಷಿ ಸುಧಾರಣೆಗೆ ಸಂಬಂಧಿಸಿ ಅಂಗೀಕರಿಸಲಾಗಿರುವ ಮೂರು ಮಸೂದೆಗಳು ಐತಿಹಾಸಿಕ. ಇವುಗಳಿಂದ ರೈತರು ಹಾಗೂ ಕೃಷಿ ಕ್ಷೇತ್ರಕ್ಕೆ ಅನುಕೂಲವಾಗಲಿದೆ. ಮಧ್ಯವರ್ತಿಗಳು ಹಾಗೂ ವಿವಿಧ ಸಮಸ್ಯೆಗಳಿಂದ ರೈತರು ಹಾಗೂ ಕೃಷಿ ಕ್ಷೇತ್ರಕ್ಕೆ ಮುಕ್ತಿ ನೀಡಲಿವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

‘ಕೆಲವು ಹಿತಾಸಕ್ತಿಗಳು ಮಸೂದೆಗಳ ಕುರಿತಂತೆ ರೈತರ ದಾರಿ ತಪ್ಪಿಸುತ್ತಿವೆ.  ಈಗ ಚಾಲ್ತಿಯಲ್ಲಿರುವ ಕನಿಷ್ಠ ಬೆಂಬಲ ಬೆಲೆ, ಸರ್ಕಾರವೇ ಕೃಷಿ ಉತ್ಪನ್ನಗಳ ಖರೀದಿಯಂತಹ ವ್ಯವಸ್ಥೆ ಮುಂದುವರಿಯಲಿವೆ.  ಈ ಮಸೂದೆಗಳ ಪರಿಣಾಮ ರೈತರಿಗೆ ಇನ್ನೂ ಹಲವಾರು ಸೌಲಭ್ಯಗಳು, ಅನುಕೂಲಗಳು ದೊರೆಯಲಿವೆ’ ಎಂದು ಹೇಳಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು