ಗುರುವಾರ , ಆಗಸ್ಟ್ 18, 2022
24 °C

ಅಗಸ್ಟಾವೆಸ್ಟ್‌ಲ್ಯಾಂಡ್‌: ಕ್ರಿಶ್ಚಿಯನ್‌ ಮೈಕೆಲ್‌ ಜಾಮೀನು ಅರ್ಜಿ ತಿರಸ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಗಸ್ಟಾವೆಸ್ಟ್‌ಲ್ಯಾಂಡ್‌ ಹಗರಣದಲ್ಲಿ ಮಧ್ಯವರ್ತಿಯಾಗಿದ್ದ ಆರೋಪ ಎದುರಿಸುತ್ತಿರುವ ಕ್ರಿಶ್ಚಿಯನ್‌ ಮೈಕೆಲ್‌ ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್‌ ಶುಕ್ರವಾರ ತಿರಸ್ಕರಿಸಿತು.

ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಮೈಕೆಲ್‌ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ. ಜಾರಿ ನಿರ್ದೇಶನಾಲಯವು (ಇ.ಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.

‘ತನಿಖೆಯ ಈ ಹಂತದಲ್ಲಿ ಆರೋಪಿಗೆ ಜಾಮೀನು ನೀಡಲಾಗದು’ ಎಂದು ಸಿಬಿಐ ಕೋರ್ಟ್‌ನ ವಿಶೇಷ ನ್ಯಾಯಾಧೀಶ ಅರವಿಂದಕುಮಾರ್‌ ಹೇಳಿದರು.

ಅಗಸ್ಟಾವೆಸ್ಟ್‌ಲ್ಯಾಂಡ್‌ ಕಂಪನಿಯ 12 ವಿವಿಐಪಿ ಹೆಲಿಕಾಪ್ಟರ್‌ಗಳನ್ನು ಖರೀದಿಸುವ ಸಂದರ್ಭದಲ್ಲಿ ₹ 3,600 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಈ ಹಗರಣದ ಪ್ರಮುಖ ಆರೋಪಿಯಾದ ಕ್ರಿಶ್ಚಿಯನ್‌ ಮೈಕೆಲ್‌ ಅವರನ್ನು 2018ರಲ್ಲಿ ದುಬೈನಿಂದ ಗಡಿಪಾರು ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು