ಶನಿವಾರ, ಅಕ್ಟೋಬರ್ 31, 2020
21 °C

ಬಿಹಾರ ಚುನಾವಣೆ: ಜೆಡಿಯು ಸೇರಲಿದ್ದಾರೆ ನಿವೃತ್ತ ಡಿಜಿಪಿ ಗುಪ್ತೇಶ್ವರ ಪಾಂಡೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Gupteshwar Pandey

ಪಟ್ನಾ: ಬಿಹಾರ ಡಿಜಿಪಿ ಹುದ್ದೆಯಿಂದ ಇತ್ತೀಚೆಗಷ್ಟೇ ಸ್ವಯಂ ನಿವೃತ್ತಿ ಯೋಜನೆಯಡಿ (ವಿಆರ್‌ಎಸ್) ನಿವೃತ್ತರಾಗಿರುವ ಗುಪ್ತೇಶ್ವರ ಪಾಂಡೆ ಅವರು ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಅವರು ಶನಿವಾರ ಸಂಜೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಬಳಿಕ, ‘ಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಕ್ಕೆ ಧನ್ಯವಾದ ತಿಳಿಸಲು ಮುಖ್ಯಮಂತ್ರಿಗಳನ್ನು ಬೇಟಿಯಾಗಿದ್ದೇನೆ. ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ’ ಎಂದು ಹೇಳಿದ್ದರು.

ಇದನ್ನೂ ಓದಿ: ಬಿಹಾರ ಚುನಾವಣೆ: ಮೂರು ಹಂತಗಳಲ್ಲಿ ಮತದಾನ, ನ.10ಕ್ಕೆ ಫಲಿತಾಂಶ

ಪಾಂಡೆ ಅವರ ನಿವೃತ್ತಿ ನಿರ್ಧಾರವನ್ನು ಮಂಗಳವಾರ ಬಿಹಾರ ಸರ್ಕಾರ ಅಂಗೀಕರಿಸಿತ್ತು. ನಿಯಮಾನುಸಾರ ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಕಾದರೆ ಸರ್ಕಾರಿ ಸೇವೆಯಿಂದ ನಿವೃತ್ತಿಯಾಗಿ 3 ತಿಂಗಳ ಅವಧಿ ಪೂರ್ಣಗೊಳ್ಳಬೇಕು. ಆದರೆ, ಬಿಹಾರದಲ್ಲಿ ಅಕ್ಟೋಬರ್ 28ರಿಂದ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 10ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು