ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ ಚುನಾವಣಾ ಕಣಕ್ಕೆ ಎಎಪಿ

ಏಪ್ರಿಲ್ 2ರಂದು ಅಹಮದಾಬಾದ್‌ನಲ್ಲಿ ಪಾದಯಾತ್ರೆಗೆ ಸಜ್ಜು
Last Updated 17 ಮಾರ್ಚ್ 2022, 21:48 IST
ಅಕ್ಷರ ಗಾತ್ರ

ಅಹಮದಾಬಾದ್: ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿ ಅಧಿಕಾರ ಹಿಡಿದಿರುವ ಆಮ್ ಆದ್ಮಿ ಪಕ್ಷವು (ಎಎಪಿ), ಈಗ ಗುಜರಾತ್‌ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದೆ.

ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಹಾಗೂ ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಗುಜರಾತ್‌ನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಇಬ್ಬರೂ ನಾಯಕರು ಸಾವಿರಾರು ಕಾರ್ಯಕರ್ತರ ಜೊತೆ ಅಹಮದಾಬಾದ್‌ನಲ್ಲಿಏಪ್ರಿಲ್ 2ರಂದು ಬೃಹತ್ ಪಾದಯಾತ್ರೆ ನಡೆಸಲಿದ್ದಾರೆ. ಮಧ್ಯಮವರ್ಗ ಹಾಗೂ ಬಡವರು ಹೆಚ್ಚಾಗಿ ವಾಸಿಸುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಕೇಜ್ರಿವಾಲ್, ಮಾನ್ ಅವರು ಬಾಪುನಗರ ಮತ್ತು ನಿಕೋಲ್ ಪ್ರದೇಶಗಳಲ್ಲಿ ತಿರಂಗಾ ಯಾತ್ರೆ ಕೈಗೊಳ್ಳಲಿದ್ದಾರೆ.

‘ಪಾದಯಾತ್ರೆ ಮೂಲಕ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭವಾಗಲಿದೆ. ಬಿಜೆಪಿಯು ಅವಧಿಪೂರ್ವ ಚುನಾವಣೆಗೆ ಹೋಗುವ ಸಾಧ್ಯತೆಯಿದೆ’ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.

ಪಾದಯಾತ್ರೆಗೆ ಅನುಮತಿ ನೀಡುವಂತೆ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ. ‘ರಾಜ್ಯದ ವಿವಿಧ ಭಾಗಗಳಿಂದ 10 ಸಾವಿರ ಜನರು ಬರುವ ನಿರೀಕ್ಷೆಯಿದೆ’ ಎಂದು ಪಕ್ಷದ ಮುಖಂಡ ಆರ್‌.ಸಿ. ಪಟೇಲ್ ಅವರು ಪೊಲೀಸರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT