ಬುಧವಾರ, ನವೆಂಬರ್ 25, 2020
25 °C

ಬಿಹಾರದಲ್ಲಿ ಉದ್ಯೋಗ, ಮೂಲಸೌಕರ್ಯಕ್ಕೆ ಆದ್ಯತೆ: ನರೇಂದ್ರ ಮೋದಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಅಂತಿಮ ಹಂತದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದ ಅಭಿವೃದ್ಧಿಗೆ ಎನ್‌ಡಿಎ ನೀಡಿರುವ ಕೊಡುಗೆಗಳ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸರಣಿ ಟ್ವೀಟ್ ಮಾಡಿದ್ದಾರೆ.

ಈಗಾಗಲೇ ಬಿಹಾರದಲ್ಲಿ ಎರಡು ಹಂತಗಳ ಮತದಾನ ಶಾಂತಿಯುತವಾಗಿ ನಡೆದಿದ್ದು ಅಂತಿಮ ಹಂತದ ಮತದಾನ ಶನಿವಾರ ನಡೆಯಲಿದೆ. ನವೆಂಬರ್‌ 10ರಂದು ಫಲಿತಾಂಶ ಹೊರ ಬರಲಿದೆ.

ಕೃಷಿ ಯೋಜನೆಗಳು, ಮೂಲಸೌಕರ್ಯ, ಸಮಾಜ ಕಲ್ಯಾಣ ಸೇರಿದಂತೆ ಬಿಹಾರದ ಅಭಿವೃದ್ಧಿಗೆ ಎನ್‌ಡಿಎ ಸರ್ಕಾರ ಸಾಕಷ್ಟು ಕೊಡುಗೆಗಳನ್ನು ನೀಡಿದೆ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಪಟ್ಟಿ ಮಾಡಿದ್ದಾರೆ.

ಬಿಹಾರ ಯಾವಾಗಲೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದ ರಾಜ್ಯವಾಗಿದೆ. ಆಗಾಗಿಯೇ ಬಿಹಾರದ ಜನರು ಉತ್ತಮ ಆಡಳಿತಕ್ಕೆ ಆದ್ಯತೆ ನೀಡುತ್ತಾರೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. 

ಬಿಹಾರಕ್ಕೆ ಸಾಕಷ್ಟು ಬಂಡವಾಳ ಹೂಡಿಕೆ ಹರಿದು ಬರುವಂತಹ ಯೋಜನೆಗಳನ್ನು ರೂಪಿಸಲಾಗುವುದು. ಇದರಿಂದ ಯುವಕರಿಗೆ ಉದ್ಯೋಗಾವಕಾಶಗಳು ಲಭ್ಯವಾಗಲಿವೆ.  ಮುದ್ರಾ ಯೋಜನೆ, ಸ್ಟ್ಯಾಂಡ್ ಅಪ್ ಯೋಜನೆ ಅಡಿ ಬಿಹಾರಕ್ಕೆ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ.

ಎನ್‌ಡಿಎ ಸರ್ಕಾರದಿಂದ ಮಾತ್ರ ಯುವಕರಿಗೆ ಉದ್ಯೋಗ, ರೈತರಿಗೆ ಅನುಕೂಲವಾಗಲಿದೆ ಎಂದು ಮೋದಿ ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು