ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್ತಿನ ಬಜೆಟ್‌ ಅಧಿವೇಶನ: ಕಾರ್ಯತಂತ್ರ ರೂಪಿಸಲು 28ರಂದು ಕಾಂಗ್ರೆಸ್‌ ಸಭೆ

Last Updated 27 ಜನವರಿ 2022, 11:18 IST
ಅಕ್ಷರ ಗಾತ್ರ

ನವದೆಹಲಿ: ಜನವರಿ 31ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ. ಆ ಹಿನ್ನೆಲೆಯಲ್ಲಿ ಪಕ್ಷದ ನಿಲುವನ್ನು ಚರ್ಚಿಸಲು ಹಾಗೂ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನಾಯಕರು ಶುಕ್ರವಾರ ಸಭೆ ಸೇರಲಿದ್ದಾರೆ.

ಈ ಸಭೆಯು ಸೋನಿಯಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಉಭಯ ಸದನಗಳ ನಾಯಕರು, ಮುಖ್ಯ ಸಚೇತಕರು ಮತ್ತು ಪಕ್ಷದ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ.

ಹೆಚ್ಚುತ್ತಿರುವ ನಿರುದ್ಯೋಗ, ತೈಲ ದರ, ಕೋವಿಡ್ ಪರಿಸ್ಥಿತಿ ಮತ್ತು ಅಮರ್ ಜವಾನ್ ಜ್ಯೋತಿಯ ಸ್ಥಳಾಂತರದ ಕುರಿತ ವಿಚಾರಗಳನ್ನು ಕಾಂಗ್ರೆಸ್ ಪಕ್ಷವು ಸಂಸತ್ತಿನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ.

ಬಜೆಟ್ ಅಧಿವೇಶನದ ಮೊದಲಾರ್ಧವು ಜನವರಿ 31 ರಿಂದ ಫೆಬ್ರುವರಿ 11ರ ವರೆಗೆ ನಡೆಯುತ್ತದೆ. ಮಾರ್ಚ್ 14 ರಂದು ಮತ್ತೆ ಆರಂಭವಾಗಲಿರುವ ಅಧಿವೇಶನ ಏಪ್ರಿಲ್ 8 ರವರೆಗೆ ನಡೆಯಲಿದೆ. ಫೆಬ್ರುವರಿ 1ರಂದು ಸರ್ಕಾರವು 2022-23 ನೇ ಸಾಲಿನ ಬಜೆಟ್ ಮಂಡಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT